ಸಾಧನೆ

ಐಐಟಿ-ಜೆಇಇ: ಬೆಂಗಳೂರಿನ ಅಮಿತ್‌ಗೆ 122ನೇ ರ್ಯಾಂಕ್

ದೇಶದಲ್ಲಿನ ಐಐಟಿಗಳ ಪ್ರವೇಶಕ್ಕಾಗಿ ನಡೆಸುವ ಜಂಟಿ ಪ್ರವೇಶ ಪರೀಕ್ಷೆ(ಜೆಇಇ-ಅಡ್ವಾನ್ಸ್) ಫಲಿತಾಂಶ ಗುರುವಾರ ಪ್ರಕಟವಾಗಿದ್ದು,...

ಐಐಟಿ-ಜೆಇಇ: ಬೆಂಗಳೂರಿನ ಅಮಿತ್‌ಗೆ 122ನೇ ರ್ಯಾಂಕ್
ಅಮಿತ್‌ ದೇಶಪಾಂಡೆ
Published On :

ಬೆಂಗಳೂರು: ದೇಶದಲ್ಲಿನ ಐಐಟಿಗಳ ಪ್ರವೇಶಕ್ಕಾಗಿ ನಡೆಸುವ ಜಂಟಿ ಪ್ರವೇಶ ಪರೀಕ್ಷೆ(ಜೆಇಇ-ಅಡ್ವಾನ್ಸ್) ಫಲಿತಾಂಶ ಬುಧವಾರ ಸಂಜೆ ಪ್ರಕಟವಾಗಿದ್ದು, ಬೆಂಗಳೂರಿನ ಅಮಿತ್ ಎಸ್.ದೇಶಪಾಂಡೆ ರಾಷ್ಟ್ರೀಯ ಮಟ್ಟದಲ್ಲಿ 122ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಎಂಜಿನಿಯರಿಂಗ್‌ನಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದ ಅಮಿತ್ ಎಫ್ ಐಐಟಿ ಜೆಇಇ ಕೋಚಿಂಗ್ ಸೆಂಟರ್ ವಿದ್ಯಾರ್ಥಿಯಾಗಿದ್ದು, ಅವರ ತಾಯಿ ಸಂಧ್ಯಾ ದೇಶಪಾಂಡೆ ಈ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, ಆತ 100ರೊಳಗಿನ ರ್ಯಾಂಕ್ ಬರುವ ನಿರೀಕ್ಷೆ ಹೊಂದಿದ್ದ. ಆದರೆ 122 ಬಂದಿದೆ ಎಂದಿದ್ದಾರೆ. ಅಲ್ಲದೆ ಅಮಿತ್ ಮುಂದೇ ಏನು ಮಾಡಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.

ಜೆಇಇ ಪ್ರವೇಶ ಪರೀಕ್ಷೆಯು ಮೇ 24ರಂದು ನಡೆದಿತ್ತು. 1.5 ಲಕ್ಷ ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 26 ಸಾವಿರ ವಿದ್ಯಾರ್ಥಿಗಳು ಜೆಇಇ-ಆಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದುಕೊಂಡಿದ್ದರು.

ಭಾರತದಲ್ಲಿರುವ ಒಟ್ಟು 16 ಐಐಟಿಗಳಲ್ಲಿರುವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪರೀಕ್ಷೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.