ಹಣ್ಣು-ತರಕಾರಿಗಳಲ್ಲಿ ಹೆಚ್ಚು ಕೀಟನಾಶಕ ಅಂಶ ಪತ್ತೆ: ಸರ್ಕಾರ ವರದಿ
ತರಕಾರಿ, ಹಣ್ಣು, ಅಕ್ಕಿ, ಗೋಧಿ ಸೇರಿದಂತೆ ಇತರೆ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಅಂಶ...

ನವದೆಹಲಿ: ತರಕಾರಿ, ಹಣ್ಣು, ಅಕ್ಕಿ, ಗೋಧಿ ಸೇರಿದಂತೆ ಇತರೆ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಅಂಶ ಪತ್ತೆಯಾಗಿದೆ ಎಂದು ಸರ್ಕಾರದ ವರದಿ ಹೇಳಿದೆ.
16,790ರಷ್ಟು ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 509 ಆಹಾರಗಳಲ್ಲಿ ಹೆಚ್ಚಿನ ಕೀಟನಾಶಕ ಅಂಶವಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಹಾಲು, ಮಾಂಸ, ಮತ್ತು ನೀರಿನಲ್ಲಿ ಯಾವುದೇ ರೀತಿಯ ಕೀಟನಾಶಕ ಪತ್ತೆಯಾಗಿಲ್ಲ.
ರಾಷ್ಟ್ರಮಟ್ಟದಲ್ಲಿ ಕೀಟನಾಶಕಗಳ ಬಳಕೆ ಕಡಿತ ಯೋಜನೆಯಡಿಯಲ್ಲಿ ನಡೆಸಿದ ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ತರಕಾರಿ ಮತ್ತು ಹಣ್ಣುಗಳಿಗೆ ಹೆಚ್ಚಿನ ಮಟ್ಟದಲ್ಲಿ ಕೀಟನಾಶಕಗಳನ್ನು ಸಿಂಪಡಿಸಲಾಗುತ್ತಿದೆ ಎಂದು ಈ ವರದಿ ಹೇಳುತ್ತಿದೆ.
ಸಗಟು ಮಾರಾಟ ಮಳಿಗೆಗಳಲ್ಲಿ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಸಂಗ್ರಹಿಸಲಾದ ಆಹಾರಗಳನ್ನು ಸಂಗ್ರಹಿಸಿ ದೇಶದ ವಿವಿಧ ಲ್ಯಾಬ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯ ಪ್ರಕಾರ, 7,591 ತರಾಕಾರಿಗಳಲ್ಲಿ 221 ತರಕಾರಿಗಳಲ್ಲಿ ಹೆಚ್ಚಿನ ಮಟ್ಟದ ಕ್ರಿಮಿನಾಶಕಗಳು ಪತ್ತೆಯಾಗಿದೆ.
ಎಲೆಕೋಸು, ಬದನೆ, ಟೊಮೆಟೋ, ಬೆಂಡಕಾಯಿ, ಬೆಂಡೆಕಾಯಿ, ಸೌತೆಕಾಯಿ, ಹಸಿರು ಬಟಾಣಿಗೆ ಹೋಲಿಸಿದರೆ, ಕೋಸು, ಕ್ಯಾಪ್ಸಿಕಂ, ಹಸಿರು ಮೆಣಸಿಕಾಯಿ, ಹೂಕೋಸುಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಪತ್ತೆಯಾಗಿದೆ.
ಇನ್ನು ಹಣ್ಣುಗಳಲ್ಲಿ 2,235ಕ್ಕೆ 36 ಹಣ್ಣುಗಳು ಹೆಚ್ಚಿನ ಕೀಟನಾಶಕ ಅಂಶ ಹೊಂದಿದೆ. ಅದರಲ್ಲೂ ದ್ರಾಕ್ಷಿಗಳಿಗೆ ಹೆಚ್ಚಿನ ಮಟ್ಟದ ಕೀಟನಾಶಕ ಬಳಸಲಾಗುತ್ತಿದೆ ಎಂಬುದು ಈ ಪರೀಕ್ಷೆಯಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


