ಭಾರತದಲ್ಲಿ ವೋಕ್ಸ್ ವ್ಯಾಗನ್ ಕಾರುಗಳಿಂದ ಹೆಚ್ಚು ಹೊಗೆ ಹೊರಸೂಸುವಿಕೆ: ಕೇಂದ್ರ ಸರ್ಕಾರ
ವೋಕ್ಸ್ ವ್ಯಾಗನ್ ಕಂಪನಿಯ ಕಾರುಗಳು ಭಾರತದಲ್ಲಿ ಮಿತಿಗಿಂತಲೂ 9 ಪಟ್ಟು ಹೆಚ್ಚು ಹೊಗೆ ಹೊರಸೂಸುತ್ತಿದೆ ಎಂದು ಕೇಂದ್ರ ಸರ್ಕಾರ...

Published On :
ನವದೆಹಲಿ: ವೋಕ್ಸ್ ವ್ಯಾಗನ್ ಕಂಪನಿಯ ಕಾರುಗಳು ಭಾರತದಲ್ಲಿ ಮಿತಿಗಿಂತಲೂ 9 ಪಟ್ಟು ಹೆಚ್ಚು ಹೊಗೆ ಹೊರಸೂಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಭಾರಿ ಕೈಗಾರಿಕಾ ಸಚಿವ ಅನಂತ್ ಗೀತೆ ಅವರು ಮಾತನಾಡಿ, ವೋಕ್ಸ್ ವ್ಯಾಗನ್ ಕಾರುಗಳಲ್ಲಿ ಹೊಗೆ ಹೊರಸೂಸುವಿಕೆ ಪ್ರಮಾಣ ಮಿತಿಗಿಂತಲೂ ಹೆಚ್ಚಾಗಿದ್ದು, ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಾಲಿನ್ಯ ತಪಾಸಣೆ ಮಹಾ ಮೋಸ ಪ್ರಕರಣಕ್ಕೆ ಸಂಬಂಧಿಸಿದಂತೆ ಜರ್ಮನಿಯ ಪ್ರತಿಷ್ಠಿತ ಕಾರು ನಿರ್ಮಾಣ ಸಂಸ್ಥೆ ವೋಕ್ಸ್ ವ್ಯಾಗನ್ ವಿರುದ್ಧ ತನಿಖೆ ಆರಂಭಗೊಂಡ ಬೆನ್ನಲ್ಲೇ ಭಾರತ ತನಿಖೆ ಕೈಗೊಂಡಿತ್ತು. ಭಾರತದಲ್ಲಿ ವೋಕ್ಸ್ ವ್ಯಾಗನ್ ಕಂಪನಿ 3.24 ಲಕ್ಷ ವಾಹನಗಳನ್ನು ಮಾರಾಟ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


