ಮೈಸೂರು ಪ್ರವಾಸೋದ್ಯಕ್ಕೆ ಹೊಡೆತ ನೀಡಿದ ಸಿಎಎ ಪ್ರತಿಭಟನೆ!
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯಿಂದ ಮೈಸೂರಿನ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯಿಂದ ಮೈಸೂರಿನ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಅತಿ ಹೆಚ್ಚು ಪ್ರವಾಸಿಗರು ನಗರಕ್ಕೆ ಆಗಮಿಸುವ ಮೈಸೂರು ನಗರ ಬಾರಿ ಅತಿ ಕಡಿಮೆ ಜನರನ್ನು ಕಂಡಿದೆ. ಈ ತಿಂಗಳಲ್ಲಿ ಬಹುತೇಕ ಹೋಟೆಲ್, ರೆಸಾರ್ಟ್ ತುಂಬಿರುತ್ತಿದ್ದವು. ಕ್ರಿಸ್ ಮಸ್ ಹಬ್ಬದಿಂದ ಹೊಸ ವರ್ಷದವರೆಗೆ ಕಿಕ್ಕಿರಿದ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ವಿಭಿನ್ನವಾಗಿದೆ.
ಅರಮನೆ ನಿರ್ವಹಣಾ ಮಂಡಳಿಯ ಅಧಿಕಾರಿಗಳ ಪ್ರಕಾರ ಪ್ರವಾಸಿಗರ ಸಂಖ್ಯೆಯಲ್ಲಿ ಅಂತಹ ವ್ಯತ್ಯಾಸವೇನೂ ಆಗಿಲ್ಲ. ಆದರೆ, ಖಾಸಗಿ ಹೋಟೆಲ್, ರೆಸಾರ್ಟ್ ಮಾಲೀಕರ ಪ್ರಕಾರ ಶೇ. 20ರಷ್ಟು ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.
ಈ ಕುರಿತು ಯುಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ, ಸಾಮಾನ್ಯವಾಗಿ ಡಿಸೆಂಬರ್ 2ನೇ ವಾರದಿಂದ ಜನವರಿ ಮೊದಲನೇ ವಾರದವರೆಗೂ ಹೋಟೆಲ್ ಗಳು ತುಂಬಿರುತ್ತಿದ್ದವು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಸಿಎಎ ವಿರೋಧಿ ಪ್ರತಿಭಟನೆ ಮುಂದುವರಿದಲ್ಲಿ ಅದು ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
2018ರ ಡಿಸೆಂಬರ್ ನಲ್ಲಿ ಮೈಸೂರು ಅರಮನೆಗೆ 4.8 ಲಕ್ಷ ಜನರು ಆಗಮಿಸಿದ್ದರು. ಆದರೆ, ಈ ವರ್ಷ ಅದು 2.26ಕ್ಕಿಳಿದಿದೆ.
ಸಾಮಾನ್ಯವಾಗಿ ಮೈಸೂರಿಗೆ ವಾರ್ಷಿಕ 3.5 ಮಿಲಿಯನ್ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದ ಪ್ರತ್ಯಕ್ಞ ಹಾಗೂ ಪರೋಕ್ಷವಾಗಿ 80 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


