ವಾಹನ

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರವಾಸಿಗರಿಗೆ ಮುಕ್ತ: ರಾಜನಾಥ್ ಸಿಂಗ್ ಘೋಷಣೆ

ಕಳೆದ ಮೂರು ದಶಕಗಳಿಂದ ಭಾರತ ಮತ್ತು ಪಾಕಿಸ್ತಾನಿ ಸೇನೆಗಳು ಹೆಚ್ಚು ಪ್ರಾಮುಖ್ಯತೆ ನೀಡಿ ಅಷ್ಟೇ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿರುವ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ನೀರ್ಗಲ್ಲು ಪ್ರದೇಶ ಪ್ರವಾಸಿಗರಿಗೆ ಸೋಮವಾರದಿಂದ ಮುಕ್ತವಾಗಿದೆ.

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರವಾಸಿಗರಿಗೆ ಮುಕ್ತ: ರಾಜನಾಥ್ ಸಿಂಗ್ ಘೋಷಣೆ
ಸಿಯಾಚಿನ್
Published On :

ಲಡಾಖ್: ಕಳೆದ ಮೂರು ದಶಕಗಳಿಂದ ಭಾರತ ಮತ್ತು ಪಾಕಿಸ್ತಾನಿ ಸೇನೆಗಳು ಹೆಚ್ಚು ಪ್ರಾಮುಖ್ಯತೆ ನೀಡಿ ಅಷ್ಟೇ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿರುವ ವಿಶ್ವದ ಅತಿ ಎತ್ತರದ  ಯುದ್ಧಭೂಮಿಯಾದ ಸಿಯಾಚಿನ್ ನೀರ್ಗಲ್ಲು ಪ್ರದೇಶ ಪ್ರವಾಸಿಗರಿಗೆ ಸೋಮವಾರದಿಂದ ಮುಕ್ತವಾಗಿದೆ. 

ಲಡಾಖ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರವಾಸಿಗರಿಗಾಗಿ ಆಯಕಟ್ಟಿನ ಮಹತ್ವದ ಸಿಯಾಚಿನ್‌ನ ಬೇಸ್ ಕ್ಯಾಂಪ್ ತೆರೆಯುವುದಾಗಿ ಘೋಷಿಸಿದರು.
   
"ಲಡಾಖ್ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಲಡಾಖ್‌ನಲ್ಲಿ ಉತ್ತಮ ಸಂಪರ್ಕವು ಖಂಡಿತವಾಗಿಯೂ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತರುತ್ತದೆ. ಸಿಯಾಚಿನ್ ಪ್ರದೇಶವು ಈಗ ಪ್ರವಾಸಿಗರಿಗೆ ಮತ್ತು ಪ್ರವಾಸೋದ್ಯಮಕ್ಕೆ ಮುಕ್ತವಾಗಿದೆ. ಸಿಯಾಚಿನ್‍ ಮೂಲ ಶಿಬಿರದಿಂದ ಕುಮಾರ್ ಪೋಸ್ಟ್ ವರೆಗೆ ಇಡೀ ಪ್ರದೇಶವನ್ನು ಪ್ರವಾಸೋದ್ಯಮ ಉದ್ದೇಶಗಳಿಗಾಗಿ ತೆರೆಯಲಾಗಿದೆ ”ಎಂದು ಸಿಂಗ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
   
ಕುಮಾರ್ ಪೋಸ್ಟ್ 18,875 ಅಡಿ ಎತ್ತರದಲ್ಲಿದೆ. ಪ್ರವಾಸಿಗರು ಪಾರ್ಟಾಪುರದ ಮೂಲ ಶಿಬಿರದಿಂದ 11,000 ಅಡಿ ಎತ್ತರದಲ್ಲಿ ಕುಮಾರ್ ಪೋಸ್ಟ್‌ಗೆ ಪ್ರಯಾಣಿಸಲು ಸಾಧ್ಯವಾಗುತ್ತದೆ.
   
ಅಂದರೆ, ಬೇಸ್ ಕ್ಯಾಂಪ್‌ನಿಂದ ಕುಮಾರ್ ಪೋಸ್ಟ್‌ಗೆ ಆಯೋಜಿಸಿರುವ ವಾರ್ಷಿಕ ಸಾಹಸ ಯಾತ್ರೆ ಹೊರತಾಗಿಯೂ ಪ್ರವಾಸಿಗರು ಸಹ ಆಯಕಟ್ಟಿನ ಮಹತ್ವದ ಪ್ರದೇಶದಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಸಾಧ್ಯವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.