ಬೀಡಿ, ಸಿಗರೇಟು ತುಟ್ಟಿ, ಸೀಮೆಎಣ್ಣೆ ಸ್ಟೌವ್, ಪಾದರಕ್ಷೆ ಅಗ್ಗ
ತಂಬಾಕು ಬಳಕೆಯನ್ನು ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಬೀಡಿ, ಸಿಗರೇಟು, ಗುಟ್ಕಾ ಮತ್ತಿತರ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ..

ಬೆಂಗಳೂರು: 2015-16ನೇ ಸಾಲಿನ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಶುಕ್ರವಾರ ಮಂಡಿಸಿದ್ದು, ಯೋಜನಾ ಗಾತ್ರವನ್ನು ರಾಜ್ಯ ಸರ್ಕಾರ ರು. 72,597 ಕೋಟಿ ಎಂದು ನಿಗದಿಪಡಿಸಿದೆ.
ಈ ಯೋಜನಾ ಗಾತ್ರದಲ್ಲಿ ರಾಜ್ಯ ಸರ್ಕಾರದ ಸಂಪನ್ಮೂಲಗಳು ರೂ 67,882 ಕೋಟಿ ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಸಂಪನ್ಮೂಲ ರು. 8645 ಕೋಟಿ ಕೂಡ ಸೇರಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಬಜೆಟ್‌ನ ಯೋಜನಾ ಗಾತ್ರ ಶೇ.10.67 ರಷ್ಟು ಹೆಚ್ಚಳವಾಗಿದೆ.
ತಂಬಾಕು ಬಳಕೆಯನ್ನು ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಬೀಡಿ, ಸಿಗರೇಟು, ಗುಟ್ಕಾ ಮತ್ತಿತರ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.17 ರಿಂದ ಶೇ.20 ಕ್ಕೆ ಹೆಚ್ಚಳ ಮಾಡಿದೆ. ಇನ್ನು ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆ ದರ(ಸೆಸ್)ವನ್ನು ಶೇ.1 ರಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ಮದ್ಯ, ಮೊಬೈಲ್, ಗುಟ್ಕಾ, ಸಿಗರೇಟ್, ಸೌಂದರ್ಯವರ್ಧಕ, ಪೆಟ್ರೋಲ್, ತಂಬಾಕು ಪದಾರ್ಥಗಳ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದ್ದು, ಸೀಮೆಎಣ್ಣೆ, ಬತ್ತಿ ಸ್ಟೌವ್, ಮೊಬೈಲ್ ಚಾರ್ಜರ್, ಕೇಬಲ್, 500 ರೂ. ಒಳಗಿನ ಪಾದರಕ್ಷೆ ಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ.
17 ಶ್ರೇಣಿಗಳ ಮೇಲಿನ ಅಬಕಾರಿ ಸುಂಕವನ್ನು ಶೇ. 6 ರಿಂದ ಶೇ 20ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ 2015-16 ರಲ್ಲಿ ರೂ 15,200 ಕೋಟಿ ತೆರಿಗೆ ಸಂಗ್ರಹಣೆ ಆಗಲಿದೆ. ರು.500 ವರೆಗಿನ ಪಾದರಕ್ಷೆಗಳಿಗೆ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಸೀಮೆ ಎಣ್ಣೆ ಸ್ಟೌವ್ ಮೇಲಿನ ತೆರಿಗೆ ಶೇ 14.5ರಿಂದ ಶೇ 5.5ಕ್ಕೆ ಇಳಿಕೆ ಮಾಡಲಾಗಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಜಾರಿಗೆ ತರಲು ಅನುಕೂಲವಾಗುವಂತೆ ವಾಣಿಜ್ಯೋದ್ಯಮಗಳನ್ನು ಸಿದ್ಧಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮಕ್ಕೆ ಮುಂದಾಗಿದ್ದು, ಪ್ರಸಕ್ತ ಸಾಲಿಗೆ ವಾಣಿಜ್ಯ ತೆರಿಗೆಗಳ
ಅಡಿಯಲ್ಲಿ ರ ರು.42 ಸಾವಿರ ಕೋಟಿ ತೆರಿಗೆ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


