ಬಜೆಟ್ 2016: ಶಿಕ್ಷಣ ಕ್ಷೇತ್ರಕ್ಕೆ ದಕ್ಕಿದ್ದೇನು..?
2016 ಮತ್ತು 17 ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶಿಕ್ಷಣಕ್ಕೂ ಕೊಡುಗೆ ನೀಡಿದ್ದು, ಉನ್ನತ ಶಿಕ್ಷಣಕ್ಕಾಗಿ ಸುಮಾರು 1 ಸಾವಿರ ಕೋಟಿ ರು.ಗಳನ್ನು ಮೀಸಲಿರಿಸಿದ್ದಾರೆ...

ನವದೆಹಲಿ: 2016 ಮತ್ತು 17 ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶಿಕ್ಷಣಕ್ಕೂ ಕೊಡುಗೆ ನೀಡಿದ್ದು, ಉನ್ನತ ಶಿಕ್ಷಣಕ್ಕಾಗಿ ಸುಮಾರು 1 ಸಾವಿರ ಕೋಟಿ ರು.ಗಳನ್ನು ಮೀಸಲಿರಿಸಿದ್ದಾರೆ.
ಉನ್ನತ ಶಿಕ್ಷಣಕ್ಕಾಗಿ 1000 ಕೋಟಿ ರೂಪಾಯಿ ನೆರವು ನೀಡಲಾಗುವುದು ಮತ್ತು ಹಣವನ್ನು ಉನ್ನತ ಶಿಕ್ಷಣಕ್ಕೆ ಏಜೆನ್ಸಿಗಳ ಮೂಲಕ ನೀಡಲಾಗುವುದು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. ಇದಲ್ಲದೆ ದೇಶಾದ್ಯಂತ ಸುಮಾರು 15 ಸಾವಿರ ಕೌಶಲಾಭಿವೃದ್ಧಿ ಕೇಂದ್ರ ಆರಂಭ ಮತ್ತು ಇದಕ್ಕಾಗಿ 17 ಸಾವಿರ ಕೋಟಿ ರುಪಾಯಿಯನ್ನು ಮೀಸಲಿಡುವುದಾಗಿ ಹೇಳಿದರು. 3 ವರ್ಷದಲ್ಲಿ 1 ಕೋಟಿ ಯುವಕರಿಗೆ ಕೌಶಲ್ಯ ತರಬೇತಿ ಗುರಿ ಹೊಂದಲಾಗಿದ್ದು, ಇದಕ್ಕಾಗಿ ದೇಶಾದ್ಯಂತ 17 ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ 1 ,500 ಬಹುಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜೇಟ್ಲಿ ತಿಳಿಸಿದರು. ಇದಲ್ಲದೆ ವಿಶ್ವದರ್ಜೆ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನೇ ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
ಇನ್ನು ಶಿಕ್ಷಣ ಕ್ಷೇತ್ರದ ಡಿಜಿಟಲೀಕರಣಕ್ಕೆ ಕ್ರಮ ಕೈಗೊಂಡಿರುವ ಜೇಟ್ಲಿ ಅವರು ಡಿಜಿಟಲ್ ಸಾಕ್ಷರತೆಗಾಗಿ ಎರಡು ವಿಶೇಷ ಯೋಜನೆಗಳನ್ನು ಘೊಷಿಸಿದ್ದಾರೆ. ಶೈಕ್ಷಣಿಕ ಪ್ರಮಾಣ ಪತ್ರ ಸಂಗ್ರಹಿಸಿಡಲು ಡಿಜಿಟಲ್ ಡೆಪಾಸಿಟರ್ ಯೋಜನೆ ಮತ್ತು 'ಡಿಜಿಟಲ್ ಸಾಕ್ಷರತಾ ಮಿಷನ್' ಯೋಜನೆಗಳ ಜಾರಿಗೆ ಸಿದ್ಧತೆ ಜೇಟ್ಲಿ ಸಿದ್ಧತೆ ನಡೆಸಿದ್ದಾರೆ. ಇನ್ನು ದೇಶಾದ್ಯಂತ 62 ಹೊಸ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


