ಕೇಂದ್ರ ಬಜೆಟ್ ನಿರಾಶಾದಾಯಕ: ಸಿಎಂ ಸಿದ್ದರಾಮಯ್ಯ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Published On :
ಬೆಂಗಳೂರು: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮತಾನಾಡಿದ ಅವರು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಇದು ರೈತ ಸ್ನೇಹಿ ಬಜೆಟ್ ಅಂತೂ ಅಲ್ಲವೇ ಅಲ್ಲ ಎಂದು ತಿಳಿಸಿದ್ದಾರೆ.
ಉದ್ಯೋಗ ಖಾತರಿ ಯೋಜನೆಗೆ 4500 ಕೋಟಿ ಮಾತ್ರ ಹೆಚ್ಚಳ ಮಾಡಲಾಗಿದೆ. ಆದರೆ, ಉದ್ಯೋಗ ಖಾತರಿಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ನೀಡಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದ ಕೃಷಿ ಉತ್ಪನ್ನಗಳ ಖರೀದಿಗೆ ಆನ್ ಲೈನ್ ಮಾರುಕಟ್ಟೆ ಪದ್ಧತಿಯ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದು, ದೇಶಾದ್ಯಂತ ಯೋಜನೆ ಜಾರಿ ಮಾಡುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿನವದೆಹಲಿNew DelhiSiddaramaiahಸಿದ್ದರಾಮಯ್ಯKarnatakaಕರ್ನಾಟಕರಕ್ಷಣಾ ಕ್ಷೇತ್ರಕೇಂದ್ರ ಬಜೆಟ್-2016Union Budget-2016defence sector
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


