ಸಿದ್ದರಾಮಯ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿಗೆ ಸಿಕ್ಕ ಅನುದಾನ
2017-18 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಬೆಂಗಳೂರು ಒನ್ ಮಾದರಿಯಲ್ಲಿ ಕರ್ನಾಟಕ ಒನ್. ಸೇರಿದಂತೆ ಹಲವು ಯೋಜನೆಗಳನ್ನು

Published On :
ಬೆಂಗಳೂರು: 2017-18 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಬೆಂಗಳೂರು ಒನ್ ಮಾದರಿಯಲ್ಲಿ ಕರ್ನಾಟಕ ಒನ್. ರಾಜ್ಯದ 9 ಜಿಲ್ಲೆಗಳಲ್ಲಿ ಕರ್ನಾಟಕ ವನ್ ಕೇಂದ್ರ ಸ್ಥಾಪನೆ, ಖಾಸಗಿ ಸಂಸ್ಥೆಗಳಲ್ಲಿ ನಿವೃತ್ತಿ ವಯಸ್ಸು 58ರಿಂದ 60ಕ್ಕೆ ಏರಿಕೆ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿಗೂ ಹೆಚ್ಚಿನ ಗಮನ ಹರಿಸಲಾಗಿದ್ದು, ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ವಾಪಸ್ಸಾಗುವ ನಿರುದ್ಯೋಗಿಗಳಿಗೆ ಕೇರಳ ಮಾದರಿ ಕಾರ್ಯಕ್ರಮವನ್ನು ಘೋಷಣೆ ಮಾಡಲಾಗಿದೆ. ರಸ್ತೆ ಸಾರಿಗೆ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ಜೊತೆಯಲ್ಲೇ ರಾಜ್ಯ ಸರ್ಕಾರ ವಿಮಾನ ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಿ, ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗಾಗಿ 588 ಎಕರೆ ಭೂಮಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಗರಾಭಿವೃದ್ಧಿಗೆ ಘೋಷಣೆಯಾದ ಯೋಜನೆಗಳು, ಅನುದಾನದ ಪ್ರಮುಖಾಂಶಗಳು ಹೀಗಿವೆ.
- ಡಯಲ್ 100 ಜಿಲ್ಲಾ ಕೇಂದ್ರಗಳಿಗೂ ವಿಸ್ತರಣೆ.
- ಕಾರವಾರದಲ್ಲಿ ಹೆಚ್ಚುವರಿ ಹಡಗು ನಿಲುಗಡೆಗೆ 1508ಮೀಟರ್ ಉದ್ದದ ಧಕ್ಕೆ ನಿರ್ವಿುಸಲು ಡಿಪಿಆರ್ ಮಾಡಲು ನಿರ್ಧಾರ
- ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆಗೆ 10 ಕೋಟಿ ಅನುದಾನ.
- ಚಿಂತಾಮಣಿ, ರಾಣೆಬೆನ್ನೂರು, ಬಂಟ್ವಾಳದಲ್ಲಿ ಆರ್ ಟಿ ಒ ಸ್ಥಾಪನೆ.
- ಪಾವಗಡದಲ್ಲಿ 2000 ಮೆ.ವ್ಯಾ ಸಾಮರ್ಥ್ಯದ ಸೌರವಿದ್ಯುತ್ ಪಾರ್ಕ್ ಸ್ಥಾಪನೆ
- ಪ್ರಸಕ್ತ ಸಾಲಿನಲ್ಲಿ 3,975 ಮೆ.ವ್ಯಾ ವಿದ್ಯುತ್ ಉತ್ಪಾದನೆ
- ಪ್ರಸಕ್ತ ಸಾಲಿನಲ್ಲಿ ಇಂಧನ ಇಲಾಖೆ 14,094 ಕೋಟಿ ರೂ
- ‘ಭಾಗ್ಯಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಯೂನಿಟ್ಗಳನ್ನು 18 ರಿಂದ 40 ಯೂನಿಟ್ಗೆ ಹೆಚ್ಚಳ
- 10ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾವಾರು ಕಾರ್ಯಪಡೆ ರಚನೆ
- ರಾಜ್ಯ ಸರ್ಕಾರದಿಂದ 50 ‘ಸಾಲು ಮರದ ತಿಮ್ಮಕ್ಕ’ ವೃಕ್ಷ ಪಾರ್ಕ್ ಅಭಿವೃದ್ಧಿ
- ಶಬರಿಮಲೆಯಲ್ಲಿ ಕರ್ನಾಟಕದ ಉಪ ಕಚೇರಿ ಆರಂಭಿಸಲಾಗುವುದು.
- ರಾಜ್ಯದ 50ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಯೋಜನೆ.
- ಕಚೇರಿಯಲ್ಲಿ ವೈದ್ಯಕೀಯ ಸೌಲಭ್ಯ, ಸಹಾಯವಾಣಿ ಮತ್ತು ರಕ್ಷಣೆಗಾಗಿ ಕ್ರಮ.
ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಅನುದಾನ, ಯೋಜನೆಗಳ ಘೋಷಣೆ
- ಮೈಲಾರ ಲಿಂಗೇಶ್ವರ, ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ.
- ಹೊಸ ತಾಲೂಕು ಪಂಚಾಯ್ತಿ ಕಚೇರಿ ನಿರ್ಮಾಣಕ್ಕೆ 300 ಕೋಟಿ ಅನುದಾನ
- ರಾಜ್ಯದಲ್ಲಿ ಹೊಸದಾಗಿ 460 ಗ್ರಾಮ ಪಂಚಾಯ್ತಿಗಳ ಆರಂಭ.
- ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಉಚಿತ ವೈಫೈ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


