ಕೇಂದ್ರ ಬಜೆಟ್

ಬಜೆಟ್ ಪೂರ್ವಭಾವಿ ಆರ್ಥಿಕ ಸಮೀಕ್ಷೆ: ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ

ಫೆ.1 ರಂದು 2017-18 ನೇ ಸಾಲಿನ ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದು, ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ ಇದೆ

ಬಜೆಟ್ ಪೂರ್ವಭಾವಿ ಆರ್ಥಿಕ ಸಮೀಕ್ಷೆ: ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ
ಆರ್ಥಿಕ ಸಮೀಕ್ಷೆ (ಸಂಗ್ರಹ ಚಿತ್ರ)
Published On :
ನವದೆಹಲಿ: ಫೆ.1 ರಂದು  2017-18 ನೇ ಸಾಲಿನ ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದು, ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ ಇದೆ ಎಂದಿದ್ದಾರೆ. 
ಆರ್ಥಿಕ ಸಮೀಕ್ಷೆಯಲ್ಲಿ ಕಾರ್ಮಿಕ ಹಾಗೂ ತೆರಿಗೆ ನೀತಿಗಳನ್ನು ಜಾಗತಿಕ ಮಟ್ಟದಲ್ಲಿ ಪೈಪೋಟಿ ನೀಡುವಂತಾಗಲು ಜಾರಿಗ ತರಬೇಕಿರುವ ಸುಧಾರಣೆಗಳ ಶಿಫಾರಸು ಪ್ರಮುಖವಾಗಿದೆ. ಇನ್ನು ಚಾಲ್ತಿ ಖಾತೆ ಕೊರತೆ 2016-17 ನೇ ಸಾಲಿನ ಮೊದಲಾರ್ಧದಲ್ಲಿ ಕಡಿಮೆಯಾಗಿದ್ದು ಜಿಡಿಪಿಯ ಶೇ.0.3 ರಷ್ಟಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ. 
ಸಾರ್ವಜನಿಕ ವಲಯಕ್ಕೆ ಸಂಬಂಧಿಸಿದಂತೆ ಹಲವು ಶಿಫಾರಸುಗಳನ್ನು ಮುಂದಿಟ್ಟಿರುವ ಆರ್ಥಿಕ ಸಮೀಕ್ಷೆ ವರದಿ, ಕೇಂದ್ರೀಕೃತ ಸಾರ್ವಜನಿಕ ವಲಯದ ಸ್ವತ್ತು ಪುನರ್ವಸತಿ ಸಂಸ್ಥೆ ಸ್ಥಾಪನೆಗೂ ಸಹ ಸಲಹೆ ನೀಡಿದೆ. ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಹಾಗೂ ತೈಲ ಬೆಲೆ ಕುಸಿತದಿಂದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು 2016-17 ನೇ ಸಾಲಿನ ಆರ್ಥಿಕ ಸಮೀಕ್ಷೆ ವರದಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.