ಬಜೆಟ್ ಅಧಿವೇಶನ: ಸಮಗ್ರ ಚರ್ಚೆ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಕೇಂದ್ರದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ಬಾರಿಯ ಬಜೆಟ್ ಅಧಿವೇನದಲ್ಲಿ ಸಮಗ್ರ ಚರ್ಚೆಯಾಗುವ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ...

ನವದೆಹಲಿ: ಕೇಂದ್ರದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ಬಾರಿಯ ಬಜೆಟ್ ಅಧಿವೇನದಲ್ಲಿ ಸಮಗ್ರ ಚರ್ಚೆಯಾಗುವ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.
ಸಂಸತ್ತು ಪ್ರವೇಶ ಮಾಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಜೆಟ್ ಅಧಿವೇಶನ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಿದ್ದೆ. ಈ ವೇಳೆ ಅಧಿವೇಶನದಲ್ಲಿ ವ್ಯರ್ಥ ಮಾಡದಂತೆ ಮನವಿ ಮಾಡಿಕೊಂಡಿದ್ದೆ ಎಂದು ಹೇಳಿದ್ದಾರೆ.
ಈ ಹಿಂದೆ ಮಂಡಿಸಲಾಗುತ್ತಿದ್ದ ಬಜೆಟ್ ನ್ನು ರಾತ್ರಿ ವೇಳೆಯಲ್ಲಿ ಮಂಡಿಸಲಾಗುತ್ತಿತ್ತು. ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ಅವಧಿಯಲ್ಲಿ ಮೊದಲ ಬಾರಿಗೆ ಹಗಲು ಹೊತ್ತಿನಲ್ಲಿ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿಯ ರೈಲ್ವೆ ಬಜೆಟ್ ಕೂಡ ಸಾಮಾನ್ಯ ಬಜೆಟ್ ನಲ್ಲಿಯೇ ಸೇರ್ಪಡೆಗೊಳಿಸಲಾಗುತ್ತಿದೆ ರೈಲ್ವೇ ಬಜೆಟ್ ವಿಲೀನದೊಂದಿಗೆ ಫೆ.1 ರಂದು ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದಾಗಿದೆ. ಈ ಅಪರೂಪದ ಬಜೆಟ್ ಅಧಿವೇಶನದಲ್ಲಿ ರಚನಾತ್ಮಕ ಹಾಗೂ ಸಮಗ್ರ ಚರ್ಚೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


