ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಮಂಡನೆ: ಸುಮಿತ್ರಾ ಮಹಾಜನ್
ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ: ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಇ ಅಹ್ಮದ್ ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ 2017ನೇ ಸಾಲಿನ ಬಜೆಟ್ ಅನ್ನು ನಾಳೆಗೆ ಮುಂದೂಡಬೇಕು ಎಂದು ಪ್ರಮುಖ ವಿಪಕ್ಷ ಕಾಂಗ್ರೆಸ್, ಶಿವಸೇನೆ ಹಾಗೂ ಜೆಡಿಯು ಪಕ್ಷಗಳು ಆಗ್ರಹಿಸಿದ್ದವು. ಆದರೆ ಈ ಬಗ್ಗೆ ಇದ್ದ ಎಲ್ಲ ಗೊಂದಲಗಳಿಗೆ ಸ್ವತಃ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಇಂದು ತೆರೆ ಎಳೆದಿದ್ದು, ನಿಗದಿಯಂತೇ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದ್ದಾರೆ.
ದೆಹಲಿಯ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಬಜೆಟ್ ಮಂಡನೆಗೆ ರಾಷ್ಟಪತಿಗಳ ಅನುಮೋದನೆ ಪಡೆದು ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭಿಸಲಾಗುತ್ತದೆ. ಬಳಿಕ ಮೃತಪಟ್ಟ ಸಂಸದ ಇ ಅಹ್ಮದ್ ಅವರಿಗೆ ಕಲಾಪದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಬಜೆಟ್ ಮಂಡನೆಗೆ ಅನುವು ಮಾಡಿಕೊಡಲಾಗುತ್ತದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


