ಕರ್ನಾಟಕ ಬಜೆಟ್: ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ
ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ಅವರು ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಗಳಿಗೆ ಉತ್ತೇಜನ ನೀಡಲು ಹೆಚ್ಚಿನ ...

Published On :
ಬೆಂಗಳೂರು: ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ಅವರು ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಗಳಿಗೆ ಉತ್ತೇಜನ ನೀಡಲು ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಕಲಬುರಗಿಯನ್ನು ಭಾರತ್ ಸೋಲಾರ್ ಜಿಲ್ಲೆಯನ್ನಾಗಿ ಅಭಿವೃದ್ಧಿ, ತುಮಕೂರಿನಲ್ಲಿ ಸ್ಪೋರ್ಟ್ಸ್ಮತ್ತು ಫಿಟ್ನೆಸ್ವಸ್ತುಗಳ ಉತ್ಪಾದನಾ ಘಟಕ ಸ್ಥಾಪನೆ. ಇದಕ್ಕಾಗಿ 2000 ಕೋಟಿ ಬಂಡವಾಳ ಹೂಡಿಕೆ ಉದ್ದೇಶ ಹೊಂದಿದ್ದು, ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ.
ಬೀದರ್ ನಲ್ಲಿ ಕೃಷಿ ಉಪಕರಣಗಳ ತಯಾರಿಕೆಗಾಗಿ 2000 ಕೋಟಿ ರು ಬಂಡವಾಳ ಹೂಡಿಕೆ. ಮುಂಬರುವ ವರ್ಷಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ 14 ಸಾವಿರ ಕೋಟಿ ರು ಬಂಡವಾಳ ಹೂಡಿ 8 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು.
ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಾರ್ಷಿಕವಾಗಿ 10 ಸಾವಿರ ರೂ ಧನ ಸಹಾಯ. ಗಣಿಗಾರಿಕೆ ಮತ್ತು ಸುರಕ್ಷತೆಗಾಗಿ ಕ್ವಾರಿ ಗುತ್ತಿಗೆದಾರರಿಗೆ ತರಬೇತಿ ಅಗತ್ಯ ಕಡ್ಡಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎಚ್.ಡಿ ಕುಮಾರ ಸ್ವಾಮಿH.D Kumara swamyKarnataka State budget-2018Commerce and industriesಕರ್ನಾಟಕ ಬಜೆಟ್-2018ವಾಣಿಜ್ಯ ಮತ್ತು ಕೈಗಾರಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


