ರಾಜ್ಯ ಬಜೆಟ್ 2018: ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ?
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.

Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.
ಇಂದು ಬೆಳಗ್ಗೆ ಸುಮಾರು 11.30ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಕುಮಾರಸ್ವಾಮಿ ಅವರು ಸುಧೀರ್ಘ 1 ಗಂಟೆ 49 ನಿಮಿಷಗಳ ಕಾಲ ಬಜೆಟ್ ಪ್ರತಿ ಓದಿದರು. ಪ್ರಮುಖವಾಗಿ ಎಲ್ಲರ ಕೇಂದ್ರ ಬಿಂದುವಾಗಿದ್ದ ರೈತರ ಸಾಲಮನ್ನಾ ಘೋಷಣೆ ಮಾಡಿದ ಸಿಎಂ ಕುಮಾರಸ್ವಾಮಿ, ರೈತರ 2 ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದರು.
ರೈತರ ಸಾಲಮನ್ನಾ ಘೋಷಣೆಗೂ ಮುನ್ನಾ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ನಿಮ್ಮದೇ ನೆಲ ನಿಮ್ಮದೇ ಬೆಳೆ ಎಂಬ ರಾಷ್ಟ್ರಕವಿ ಕುವೆಂಪು ಅವರ ರಚನೆಯ ಸಾಲುಗಳನ್ನು ಪ್ರಸ್ತಾಪಿಸಿ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಘೋಷಣೆ ಮಾಡಿದರು. ಅಂತೆಯೇ ಸಾಲ ಪಾವತಿ ಮಾಡಿದ ರೈತರಿಗೆ ಸಾಲದ ಹಣ ವಾಪಸ್ ನೀಡುವುದಾಗಿ ಮಾತ್ರವಲ್ಲದೇ 25 ಸಾವಿರ ಹೆಚ್ಚುವರಿ ಹಣವನ್ನು ಉತ್ತೇಜನ ಧನವಾಗಿ ನೀಡುವುದಾಗಿ ಘೋಷಣೆ ಮಾಡಿದರು.
ಸುಮಾರು 2 ಲಕ್ಷದ 25 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಕಂದಾಯ ಇಲಾಖೆಗೆ 7,180 ಕೋಟಿ ರೂ ಅನುದಾನ ನೀಡಲಾಗಿದೆ. ಅಂತೆಯೇ ಲೋಕೋಪಯೋಗಿ ಇಲಾಖೆಗೆ ಶೇ 4ರಂತೆ 10,200 ಕೋಟಿ ರೂ, ಪ್ರಾಥಮಿಕ ಶಿಕ್ಷಣ ಇಲಾಖೆಗೆ 150 ಕೋಟಿ ರೂಪಾಯಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಶೇ 11ರಷ್ಟು ಅಂದರೆ 26,581 ಕೋಟಿ ರೂ ಅನುದಾನ ನೀಡಲಾಗಿದೆ.
ಜಲ ಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ ಅನುದಾನ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ 7642 ಕೋಟಿ ರೂ. ಹಣ ಮೀಸಲಿಡಲಾಗಿದೆ. ಇದಲ್ಲದೆ ಜಲಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ, ನಗರಾಭಿವೃದ್ಧಿ - 17,727 ಕೋಟಿ ರೂ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ - 14,449 ಕೋಟಿ ರೂ. ಹಣ ಮೀಸಲಿಡಲಾಗಿದೆ.
ಅಂತೆಯೇ ವಿದ್ಯುತ್ - 14,123 ಕೋಟಿ ರೂ, ಸಮಾಜ ಕಲ್ಯಾಣ - 11,788 ಕೋಟಿ ರೂ, ಲೋಕೋಪಯೋಗಿ - 10,200 ಕೋಟಿ ರೂ, ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ - 7,953 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ -9,317 ಕೋಟಿ ರೂ, ಕೃಷಿ ಮತ್ತು ತೋಟಗಾರಿಕೆ - 7,642 ಕೋಟಿ ರೂ, ಕಂದಾಯ - 7,180 ಕೋಟಿ ರೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ - 5,725 ಕೋಟಿ ರೂ ಮತ್ತು ವಸತಿ - 3,942 ಕೋಟಿ ರೂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ 3,866 ಕೋಟಿ ರೂ. ಮೀಸಲಿಡಲಾಗಿದೆ. ಇತರೆ ಇಲಾಖೆಗಳಿಗೆ 82,196 ಕೋಟಿ ರೂ. ಮೀಸಲಿಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


