ರೈತರ ಸಾಲಮನ್ನಾ ಆಗುತ್ತೋ ಇಲ್ಲವೋ, ಆದರೆ ನಮ್ಮ ಬೇಡಿಕೆ ಈಡೇರಬೇಕು: ಕಾರ್ಮಿಕರ ಸಂಘ
ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರಾಜ್ಯ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ ನಾನಾ ವಲಯಗಳಿಂದ ಹಲವು ಬೇಡಿಕೆಗಳು ವ್ಯಕ್ತವಾಗುತ್ತಿವೆ.

Published On :
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರಾಜ್ಯ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ ನಾನಾ ವಲಯಗಳಿಂದ ಹಲವು ಬೇಡಿಕೆಗಳು ವ್ಯಕ್ತವಾಗುತ್ತಿವೆ.
ಪ್ರಮುಖವಾಗಿ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಬಜೆಟ್ ಮೇಲೆ ಕಾರ್ಮಿಕ ವಿಭಾಗ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು, ರೈತರ ಸಾಲಮನ್ನಾ ವಿಚಾರ ಎಲ್ಲರ ಕೇಂದ್ರ ಬಿಂದುವಾಗಿದ್ದರೂ ಕಾರ್ಮಿಕರ ಬೇಡಿಕೆಗಳಿಗೆ ಸಿಎಂ ಕುಮಾರಸ್ವಾಮಿ ಮನ್ನಣೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕಾರ್ಮಿಕರ ಸಂಘ ಹೇಳಿದೆ.
ಈ ಬಗ್ಗೆ ಮಾತನಾಡಿರುವ ಎಫ್ ಕೆಸಿಸಿಐ ಅಧ್ಯಕ್ಷ ಕೆ ಸುಧಾಕರ್ ಶೆಟ್ಟಿ ಅವರು, ರೈತರ ಸಾಲ ಮನ್ನ ವಿಚಾರವಾಗಿ ರಾಜ್ಯ ಸರ್ಕಾರ ಎಷ್ಟು ಗಂಭೀರವಾಗಿದೆ ಎಂಬುದು ತಿಳಿದಿಲ್ಲ. ಆದರೆ ಕಾರ್ಮಿಕ ಸಂಘಟನೆಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಸಿಎಂ ಕುಮಾರಸ್ವಾಮಿ ಈಡೇರಿಸಬೇಕಿದೆ. ಸರ್ಕಾರದ ನಿಲುವು ನಮ್ಮ ಪರವಾಗಿರಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.
ಇನ್ನು ಕಾರ್ಮಿಕ ವಲಯದಲ್ಲಿ ಪ್ರಮುಖವಾಗಿ ಗಾರ್ಮೆಂಟ್ಸ್ ವಲಯದ ನೌಕರರು ತಮ್ಮ ಪಿಂಚಣಿ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


