ಇದು ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್: ಕುಮಾರಸ್ವಾಮಿ ಬಜೆಟ್ ಬಗ್ಗೆ ಪ್ರತಿಪಕ್ಷಗಳ ಟೀಕೆ
ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್ ಎಂದು ಪ್ರತಿಪಕ್ಷದ ನಾಯಕರು ಟೀಕಿಸಿದ್ದಾರೆ.

Published On :
ಬೆಂಗಳೂರು: ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್ ಎಂದು ಪ್ರತಿಪಕ್ಷದ ನಾಯಕರು ಟೀಕಿಸಿದ್ದಾರೆ.
ಬಜೆಟ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸದನದಲ್ಲೇ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಶಾಸಕರು, ಬಜೆಟ್ ನಲ್ಲಿ ಕರಾವಳಿ ಭಾಗ, ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗಗಳಿಗೆ ಏನನ್ನೂ ನೀಡಿಲ್ಲ, ಇದು ರಾಜ್ಯ ಬಜೆಟ್ ಅಲ್ಲ ಮಂಡ್ಯ, ಮೈಸೂರು ರಾಮನಗರ ಬಜೆಟ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಜೆಟ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕುಮಾರಸ್ವಾಮಿ ಬಜೆಟ್ ನಲ್ಲಿ ಕೇವಲ 3-4 ಜಿಲ್ಲೆಗಳಿಗಷ್ಟೇ ಯೋಜನೆ-ಅನುದಾನಗಳನ್ನು ಘೋಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾತನಾಡಿದ ಆರ್ ಅಶೋಕ್, ಕುಮಾರಸ್ವಾಮಿ ಮಂಡ್ಯ, ರಾಮನಗರ, ಹಾಸನಕ್ಕೆ ಮಾತ್ರ ಮುಖ್ಯಮಂತ್ರಿಗಳಾ? ಎಂದು ಪ್ರಶ್ನಿಸಿದ್ದಾರೆ.
ನಂತರ ಮಾತನಾಡಿದ ವಿಪಕ್ಷ ನಾಯಕ ಯಡಿಯೂರಪ್ಪ, ಕುಮಾರಸ್ವಾಮಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು, ಆದರೆ ಕೇವಲ 34 ಸಾವಿರ ಕೋಟಿ ರೂಪಾಯಿ ಮೊತ್ತದ ಸಾಲ ಮನ್ನಾ ಮಾಡಿದ್ದಾರೆ. ಅದಕ್ಕೂ ಹಣಕಾಸು ಹೊಂದಾಣಿಕೆ ಬಗ್ಗೆ ಮಾಹಿತಿ ನೀಡಿಲ್ಲ. ಕುಮಾರಸ್ವಾಮಿ ಕೊಟ್ಟ ಮಾತಿಗೆ ತಪ್ಪಿ ರೈತರಿಗೆ ಧ್ರೋಹ ಮಾಡಿದ್ದಾರೆ, ಇತ್ತ ಸಾಲ ಮನ್ನಾದ ಹೆಸರಿನಲ್ಲಿ ಪೆಟ್ರೋಲ್ ದರ, ತೆರಿಗೆ ಏರಿಕೆ ಮಾಡಿ ಜನಸಾಮಾನ್ಯರಿಗೂ ಹೊರೆ ಹೊರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಹಾಸನ, ಮಂಡ್ಯ, ರಾಮನಗರಕ್ಕೆ ಸೀಮಿತವಾದ ಬಜೆಟ್, ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿಗೆ ಅನ್ಯಾಯ ಮಾಡಲಾಗಿದೆ. ಇದು ಅಣ್ತಮ್ಮಂದಿರ ಬಜೆಟ್ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamyYeddyurappaಯಡಿಯೂರಪ್ಪಪ್ರತಿಪಕ್ಷ ನಾಯಕopposition leadersKarnataka Budget 2018ಕರ್ನಾಟಕ ಬಜೆಟ್ 2018ಸಿಎಂ ಕುಮಾರಸ್ವಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


