ರಾಜ್ಯ ಬಜೆಟ್ 2018: ರಾಜಧಾನಿ ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ರಾಜಧಾನಿ ಬೆಂಗಳೂರಿಗೆ ಸಾಕಷ್ಟು ಯೋಜನೆಗಳು ಘೋಷಣೆಯಾಗಿದ್ದು, ಈ ಯೋಜನೆಗಳ ಸಂಕ್ಷಿಪ್ತ ವಿವರ ಇಂತಿದೆ.

Published On :
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ರಾಜಧಾನಿ ಬೆಂಗಳೂರಿಗೆ ಸಾಕಷ್ಟು ಯೋಜನೆಗಳು ಘೋಷಣೆಯಾಗಿದ್ದು, ಈ ಯೋಜನೆಗಳ ಸಂಕ್ಷಿಪ್ತ ವಿವರ ಇಂತಿದೆ.
ಕೊಳಗೇರಿ ವಾಸಿಗಳಿಗೆ ಸೂರು ಕಲ್ಪಿಸುವ ಯೋಜನೆ. ಬೆಂಗಳೂರಿನಲ್ಲಿ ಬಡವರಿಗೆ ಸೂರು ಕಲ್ಪಿಸಲು ಬಹುಮಹಡಿ ಮನೆ ಯೋಜನೆ ಜಾರಿ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಬಾರ್ ಕೌನ್ಸಿಲ್ ಚಟುವಟಿಕೆಗೆ 5 ಕೋಟಿ ಆರ್ಥಿಕ ನೆರವು, ಪೀಣ್ಯದಲ್ಲಿ ತ್ಯಾಜ್ಯವಸ್ತುಗಳ ಶುದ್ಧೀಕರಣ ಘಟಕ ಸ್ಥಾಪನೆ. ಇದಕ್ಕಾಗಿ ಸರ್ಕಾರದಿಂದ 10 ಕೋಟಿ ಹಣ ಮೀಸಲಿಡುವುದಾಗಿ ಘೋಷಣೆ ಮಾಡಲಾಗಿದೆ.
ಇನ್ನು ಕೆಂಪೇಗೌಡ ಬಡಾವಣೆಯಲ್ಲಿ 5000 ನಿವೇಶನ ಹಂಚಿಕೆ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ 3000 ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳರು ನಗರ ಹೊರವಲಯದಲ್ಲಿ ಪೆರಿಫೆರಲ್ ರಸ್ತೆ ನಿರ್ಮಾಣ, ಇದಕ್ಕಾಗಿ ಸರ್ಕಾರದಿಂದ ಅಂದಾಜು 11,950 ಕೋಟಿ ಸಂಗ್ರಹಕ್ಕೆ ಕ್ರಮ. ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ 50 ಕೋಟಿ ರೂ. ಮೀಸಲು. ಅಂತರ ಗಂಗಾ ಸೂಕ್ಷ್ಮ ನೀರಾವರಿ ನಿಗಮ ಸಹಭಾಗಿತ್ವದಲ್ಲಿ ಹನಿ ನೀರಾವರಿ. ಬೆಳ್ಳಂದೂರು ಕೆರೆಯ ನೀರನ್ನೂ ಬೆಂಗಳೂರು ಗ್ರಾಮಾಂತರ ಕೃಷಿಗೆ ಬಳಸಲು ಕ್ರಮ.
ಡಾ. ರಾಜಕುಮಾರ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಯೋಗ ಕೇಂದ್ರ ಸ್ಥಾಪನೆ. ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ಸ್ಥಾಪನೆ ಉದ್ದೇಶ ಹೊಂದಲಾಗಿದೆ. ಬಿಎಂಆರ್ಸಿಎಲ್, ಬಿಎಂಟಿಸಿ, ಬಿಡಿಎ, ಬಿಬಿಎಂಪಿ ಇತ್ಯಾದಿ ಸಂಸ್ಥೆಗಳ ನಡುವೆ ಸಮನ್ವಯಕ್ಕೆ ಕ್ರಮ.
ನಮ್ಮ ಮೆಟ್ರೋ 3ನೇ ಹಂತದ ವಿಸ್ತರಣೆಯೂ ಸೇರಿದಂತೆ ಮೆಟ್ರೋ ಯೋಜನೆಗಾಗಿ 1 ಸಾವಿರ ಕೋಟಿ ಮೀಸಲು. ಜೆ.ಪಿ.ನಗರದಿಂದ ಕೆ.ಆರ್.ಪುರಂ 42.75 ಕಿ.ಮೀ, ಟೋಲ್ ಗೇಟ್ನಿಂದ ಕಡಬಗೆರೆ 12.5 ಕಿ.ಮೀ, ಗೊಟ್ಟಿಗೆರೆಯಿಂದ ಬಸವಪುರ 3.07 ಕಿ.ಮೀ, ಹೆಗಡೆ ನಗರದಿಂದ ಏರೋಸ್ಪೇಸ್ ಪಾರ್ಕ್ 18.95 ಕಿ.ಮೀ, ಕೋಗಿಲು ಕ್ರಾಸ್ನಿಂದ ರಾಜಾನುಕುಂಟೆ 10.6. ಕಿ.ಮೀ ಹಾಗೂ ಇಬ್ಬಲೂರಿನಿಂದ ಕರ್ಮಲ್ ರಾಮ್ 6.67 ಕಿ.ಮೀ, ಒಟ್ಟು 95 ಕಿ.ಮೀ ಮೆಟ್ರೊ ವಿಸ್ತರಣೆಗೆ ಸಮ್ಮತಿ ಸೂಚಿಸಲಾಗಿದೆ.
ಪರಿಸರ ಸ್ನೇಹಿ ಎಲೆಕ್ಟಿಕ್ ವಾಹನಗಳ ಉತ್ತೇಜನಕ್ಕಾಗಿ ಬೆಂಗಳೂರಿನಲ್ಲಿ 4 ಕೋಟಿ ವೆಚ್ಚದಲ್ಲಿ 100 ಚಾರ್ಜಿಂಗ್ ಘಟಕ ಸ್ಥಾಪನೆ.
ಬೆಂಗಳೂರಿನಲ್ಲಿ 6 ಎಲಿವೇಟೆಡ್ ಕಾರಿಡಾರ್ ನಿರ್ಮಾಣ. 15,825 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿ. ಟ್ರಾಫಿಕ್ ಕಂಟ್ರೋಲ್ಗೆ ಸಿಗ್ನಲ್ ಫ್ರೀ ಕಾರಿಡಾರ್. ಬೆಳ್ಳಂದೂರು ಕೆರೆ ಅಭಿವೃದ್ಧಿಗೆ 50 ಕೋಟಿ ಮೀಸಲು. ಬೆಂಗಳೂರು ಹೊರವಲಯದಲ್ಲಿ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


