ರಾಜ್ಯ ಬಜೆಟ್

ರಾಜ್ಯ ಬಜೆಟ್ 2018: ಸಾರಿಗೆ ಇಲಾಖೆಗೆ ಉತ್ತೇಜನದ ಭರವಸೆ ನೀಡಿದ ಸಿಎಂ ಕುಮಾರಸ್ವಾಮಿ

ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಸಾರಿಗೆ ಇಲಾಖೆಯ ಉತ್ತೇಜನಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ 2018: ಸಾರಿಗೆ ಇಲಾಖೆಗೆ ಉತ್ತೇಜನದ ಭರವಸೆ ನೀಡಿದ ಸಿಎಂ ಕುಮಾರಸ್ವಾಮಿ
ಸಂಗ್ರಹ ಚಿತ್ರ
Published On :
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಸಾರಿಗೆ ಇಲಾಖೆಯ ಉತ್ತೇಜನಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಪ್ರಮುಖವಾಗಿ ಸಾರಿಗೆ ಇಲಾಖೆಗೆ 4236 ಬಸ್ ಗಳ ಖರೀದಿಗೆ ಸರ್ಕಾರ ಮುಂದಾಗಿದೆ. ಈ ಪೈಕಿ ವಾಯು ಮಾಲಿನ್ಯ ತಡೆಗಾಗಿ ಪರಿಸರ ಸ್ವೇಹಿ 80 ವಿದ್ಯುತ್ ಚಾಲಿತ ಬಸ್ ಗಳ ಖರೀದಿಯೂ ಸೇರಿದೆ. ಇದಲ್ಲದೆ ವಾಹನ ದಟ್ಟಣೆ ತಪ್ಪಿಸಲು 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ. ಬೆಂಗಳೂರು ನಗರ ಹೊರವಲಯದಲ್ಲಿ ಪೆರಿಫೆರಲ್​ ರಸ್ತೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗಿದ್ದು, ಇದಕ್ಕಾಗಿ ಸರ್ಕಾರದಿಂದ ಅಂದಾಜು 11,950 ಕೋಟಿ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದೆ.
ವಾಯ ಮಾಲಿನ್ಯ ತಡೆಗೆ ಎಲೆಕ್ಟ್ರಿಕ್ ವಾಹನ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ 4 ಕೋಟಿ ವೆಚ್ಚದಲ್ಲಿ 100 ಚಾರ್ಜಿಂಗ್ ಘಟಕ ಸ್ಥಾಪನೆ ಮಾಡಲಾಗುತ್ತದೆ. ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ಸ್ಥಾಪನೆ ಉದ್ದೇಶ ಹೊಂದಲಾಗಿದ್ದು, ಬಿಎಂಆರ್​ಸಿಎಲ್​, ಬಿಎಂಟಿಸಿ, ಬಿಡಿಎ, ಬಿಬಿಎಂಪಿ ಇತ್ಯಾದಿ ಸಂಸ್ಥೆಗಳ ನಡುವೆ ಸಮನ್ವಯಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. 
ಇನ್ನು ನಮ್ಮ ಮೆಟ್ರೋ 3ನೇ ಹಂತದ ವಿಸ್ತರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಜೆ.ಪಿ.ನಗರದಿಂದ ಕೆ.ಆರ್.ಪುರಂ 42.75 ಕಿ.ಮೀ, ಟೋಲ್ ಗೇಟ್​ನಿಂದ ಕಡಬಗೆರೆ 12.5 ಕಿ.ಮೀ, ಗೊಟ್ಟಿಗೆರೆಯಿಂದ ಬಸವಪುರ 3.07 ಕಿ.ಮೀ, ಹೆಗಡೆ ನಗರದಿಂದ ಏರೋಸ್ಪೇಸ್ ಪಾರ್ಕ್ 18.95 ಕಿ.ಮೀ, ಕೋಗಿಲು ಕ್ರಾಸ್​ನಿಂದ ರಾಜಾನುಕುಂಟೆ 10.6. ಕಿ.ಮೀ ಹಾಗೂ ಇಬ್ಬಲೂರಿನಿಂದ ಕರ್ಮಲ್ ರಾಮ್ 6.67 ಕಿ.ಮೀ, ಒಟ್ಟು 95 ಕಿ.ಮೀ ಮೆಟ್ರೊ ವಿಸ್ತರಣೆಗೆ ಸಮ್ಮತಿ ನೀಡಲಾಗಿದೆ.
ಅಂತೆಯೇ ಬೆಂಗಳೂರಿನಲ್ಲಿ 6 ಎಲಿವೇಟೆಡ್​ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದ್ದು, 15,825 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುತ್ತದೆ. ಟ್ರಾಫಿಕ್​ ಕಂಟ್ರೋಲ್​​ಗೆ ಸಿಗ್ನಲ್​ ಫ್ರೀ ಕಾರಿಡಾರ್. ಬೆಂಗಳೂರು ಹೊರವಲಯದಲ್ಲಿ ಫೆರಿಫೆರಲ್​ ರಿಂಗ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.