ಕೃಷಿ ಸಾಲ ಮನ್ನಾದಿಂದ ಸರ್ಕಾರಕ್ಕೆ ಹೊರೆ: ಕುಮಾರಸ್ವಾಮಿ ಬಜೆಟ್ ನಲ್ಲಿ ಜನತೆಗೆ ತೆರಿಗೆ ಏರಿಕೆ ಬರೆ!
ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಭರವಸೆಯನ್ನು ಬಜೆಟ್ ನಲ್ಲಿ ಭಾಗಶಃ ಈಡೇರಿಸಿದ್ದಾರೆ. ಆದರೆ ಸುಸ್ತಿ ಸಾಲ ಮನ್ನಾದಿಂದ ಸರ್ಕಾರದ ಮೇಲೆ ಬೀಳುವ 34 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯನ್ನು...

Published On :
ಬೆಂಗಳೂರು: ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಭರವಸೆಯನ್ನು ಬಜೆಟ್ ನಲ್ಲಿ ಭಾಗಶಃ ಈಡೇರಿಸಿದ್ದಾರೆ. ಆದರೆ ಸುಸ್ತಿ ಸಾಲ ಮನ್ನಾದಿಂದ ಸರ್ಕಾರದ ಮೇಲೆ ಬೀಳುವ 34 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯನ್ನು ಸರಿತೂಗಿಸಲು ಜನಸಾಮಾನ್ಯನ ಮೇಲೆ ತೆರಿಗೆ ಹೊರೆ ಹೊರಿಸಿದ್ದಾರೆ.
ಪೆಟ್ರೋಲ್, ಡಿಸೆಲ್ ಮೇಲಿನ ಸೆಸ್ ನ್ನು ಶೇ.32 ಕ್ಕೆ ಏರಿಕೆ ಮಾಡಲಾಗಿದ್ದು, ಈಗಾಗಲೇ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯ ಪ್ರತಿ ಲೀಟರ್ ಪೆಟ್ರೋಲ್ ಗೆ 1 ರೂಪಾಯಿ 14 ಪೈಸೆಯನ್ನು ಹೆಚ್ಚು ಹಣ ತೆರಬೇಕಾಗುತ್ತದೆ. ಇನ್ನು ಪೆಟ್ರೋಲ್ ಅಷ್ತೇ ಅಲ್ಲದೇ ಮೋಟಾರು ವಾಹನ ತೆರಿಗೆಯೂ ದುಬಾರಿಯಾಗಿದ್ದು, ಶೇ.50 ರಷ್ಟು ಏರಿಕೆ ಮಾಡಲಾಗಿದೆ.
ಇದೇ ವೇಳೆ ವಿದ್ಯುತ್ ಕೂಡಾ ದುಬಾರಿಯಾಗಲಿದ್ದು ವಿದ್ಯುತ್ ಮೇಲಿನ ತೆರಿಗೆಯನ್ನು ಶೇ.6 ರಿಂದ ಶೇ.9 ರಷ್ಟು ಏರಿಕೆ ಮಾಡಲಾಗಿದೆ. ಇದರಿಂದಾಗಿ ಪ್ರತಿ ಯುನಿಟ್ ವಿದ್ಯುತ್ ದರ 20 ಪೈಸೆ ಏರಿಕೆಯಾಗಲಿದೆ. ಬಜೆಟ್ ನಲ್ಲಿ ಮದ್ಯ ಪ್ರಿಯರಿಗೂ ನಿರಾಶೆಯಾಗುವ ಅಂಶವಿದ್ದು, ದೇಶಿಯವಾಗಿ ಉತ್ಪಾದಿಸಲಾಗುವ ಮದ್ಯದ ಎಲ್ಲಾ 18 ಸ್ಲ್ಯಾಬ್ ಗಳ ಮೇಲಿನ ಅಬಕಾರಿ ಸುಂಕವನ್ನು ಶೇ.4 ರಷ್ಟು ಏರಿಕೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamyKarnataka Budget 2018ಕರ್ನಾಟಕ ಬಜೆಟ್ 2018ಸಿಎಂ ಕುಮಾರಸ್ವಾಮಿcheaper and dearer listಅಗ್ಗ-ದುಬಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


