ಆರೋಗ್ಯ ಬಜೆಟ್ ಶೇ. 11 ರಿಂದ 8. 2 ಬಿಲಿಯನ್ ಗೆ ಹೆಚ್ಟಿಸಲು ಕೇಂದ್ರ ಸರ್ಕಾರ ಚಿಂತನೆ
ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಬಜೆಟ್ ನ್ನು ಶೇಕಡಾ 11 ರಿಂದ 8.2 ಬಿಲಿಯನ್ ನಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ.

ದೆಹಲಿ ; ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಬಜೆಟ್ ನ್ನು ಶೇಕಡಾ 11 ರಿಂದ 8.2 ಬಿಲಿಯನ್ ನಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ.
ಉನ್ನತ ಮೂಲಗಳ ಪ್ರಕಾರ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ರೋಗಗಳ ನಿಯಂತ್ರಣಕ್ಕಾಗಿ 10 ಬಿಲಿಯನ್ ಡಾಲರ್ ನಷ್ಟು ಹಣವನ್ನು ಮೀಸಲಿಟ್ಟಿದ್ದಾರೆ.
ಇಲಾಖಾ ಮಾಹಿತಿಯಂತೆ 2015 ಮಾರ್ಚ್ 31ರೊಳಗೆ ದೇಶದಲ್ಲಿ 1 ಲಕ್ಷದ 53 ಸಾವಿರದ 655 ಉಪ ಕೇಂದ್ರಗಳು, 25 ಸಾವಿರದ 308 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 5 ಸಾವಿರದ 396 ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಪ್ರತಿವರ್ಷ ಹೆಚ್ಚಾಗುತ್ತಿದ್ದು, ತುರ್ತು ಚಿಕಿತ್ಸಾ ಸೌಲಭ್ಯ ಒದಗಿಸುವ ಟ್ರೋಮಾ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


