ಕೇಂದ್ರ ಬಜೆಟ್

ಬಜೆಟ್ 2018: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ 2 ರು. ಇಳಿಕೆ!

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ 2018ರ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿದ್ದು ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ...

ಬಜೆಟ್ 2018: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ 2 ರು. ಇಳಿಕೆ!
ಪೆಟ್ರೋಲ್
Published On :
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ 2018ರ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿದ್ದು ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ ಕಡಿತಗೊಳ್ಳಲಿದೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು 2 ರುಪಾಯಿ ಕಡಿತಗೊಳಿಸಿದೆ. ಇದರಿಂದಾಗಿ ಬ್ರಾಂಡೆಡ್ ಮತ್ತು ಅನ್ ಬ್ರಾಂಡೆಡ್ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಅನ್ ಬ್ರಾಂಡೆಡ್ ಪೆಟ್ರೋಲ್ ಲೀಟರ್ 6.48 ರು. ಇದ್ದ ದರವನ್ನು 4.48 ರುಪಾಯಿಗೆ ಕಡಿತಗೊಳಿಸಲಾಗಿದೆ. ಇದೇ ರೀತಿ ಬ್ರಾಂಡೆಡ್ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 7.66 ಇದ್ದ ದರವನ್ನು 5.77 ರುಪಾಯಿಗೆ ಕಡಿತಗೊಳಿಸಲಾಗಿದೆ. 
ಅನ್ ಬ್ರಾಂಡೆಡ್ ಡಿಸೇಲ್ ಮೇಲಿನ ಅಬಕಾರಿ ಸುಂಕ 8.33 ರುಪಾಯಿ ಇದ್ದಿದ್ದನ್ನು 6.33 ರುಪಾಯಿಗೆ ಕಡಿತಗೊಳಿಸಲಾಗಿದೆ. ಇನ್ನು ಬ್ರಾಂಡೆಡ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10.69 ಇದ್ದ ದರವನ್ನು 8.69 ರುಪಾಯಿಗೆ ಕಡಿತಗೊಳಿಸಲಾಗಿದೆ. ಇನ್ನು ಈ ದರ ಮುಂದಿನ ದಿನಗಳಲ್ಲಿ ಅನ್ವಯವಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.