ರಾಜ್ಯ ಬಜೆಟ್ 2019: ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ: ಸಿಎಂ ಕುಮಾರಸ್ವಾಮಿ
2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Published On :
ಬೆಂಗಳೂರು: 2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಜಂಟಿ ಅಧಿವೇಶನದಲ್ಲಿ 2019ರ ರಾಜ್ಯ ಬಜೆಟ್ ಮಂಡಿಸಿದ ಅವರು, 2017-18ರಲ್ಲಿ ರಾಜ್ಯದ ಒಟ್ಟಾರೆ ಆಂತರಿಕ ಉತ್ಪನ್ನ ಬೆಳವಣಿಗೆ ಶೇ.10.4ರಷ್ಟಿತ್ತು. ಆದರೆ ಕೃಷಿ ಬೆಳವಣಿಗೆ ಇಳಿಕೆಯಿಂದಾಗಿ ಈ ವರ್ಷ ಆರ್ಥಿಕ ಬೆಳವಣಿಗೆ ಕುಂಠಿತವಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿನ ಮಳೆ ಅಭಾವದಿಂದಾಗಿ ಈ ಸಲ ಕೃಷಿ ಬೆಳವಣಿಗೆ ಶೇ.4.8ಕ್ಕೆ ಕುಸಿಯಬಹುದು. ಆದರೆ ಕೈಗಾರಿಕೆ ಮತ್ತು ಸೇವಾ ವಲಯ 2018-19ರಲ್ಲಿ ಕ್ರಮವಾಗಿ ಶೇ.7.4 ಮತ್ತು ಶೇ.12.3ರಷ್ಟು ಪ್ರಗತಿ ಸಾಧಿಸಲಿವೆ. ಕಳೆದ ವರ್ಷ ಈ ಪ್ರಮಾಣ ಶೇ. 4.7 ಮತ್ತು ಶೇ.12.2ರಷ್ಟಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ವೇಳೆ ಕುಮಾರಸ್ವಾಮಿ ಅವರು ನೀರಾವರಿಗೆ 17, 202 ಕೋಟಿ ರೂ ಅನುದಾನ ಮೀಸಲಿರಿಸಿದ್ದು, ಕೃಷಿ ಸಂಬಂಧಿತ ಚಟುವಟಿಕೆಗಳಿಗೆ 46, 850 ಕೋಟಿ ರೂಗಳನ್ನು ಮೀಸಲಿಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
2,34,153 ಕೋಟಿ ರೂ. ಗಾತ್ರದ ಕರ್ನಾಟಕ ಬಜೆಟ್ ಮಂಡನೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2019-20ನೇ ಸಾಲಿನಲ್ಲಿ ಒಟ್ಟು 2,34,153 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಸಾಲಿನಲ್ಲಿ ಸರ್ಕಾರದ ಒಟ್ಟಾರೆ ಸ್ವೀಕೃತಿ 2,30,738 ಕೋಟಿ ರೂ. ಆಗಿದ್ದು, 1,81,863 ಕೋಟಿ ರೂ. ಆದಾಯ ಸಂಗ್ರಹ ನಿರೀಕ್ಷೆಯಿದೆ. 48,601 ಕೋಟಿ ರೂ. ಸಾರ್ವಜನಿಕ ಸಾಲ, 48,876 ಕೋಟಿ ರೂ. ಬಂಡವಾಳ ಹೂಡಿಕೆ ಅಂದಾಜಿಸಲಾಗಿದೆ. ಕೃಷಿ ಸಾಲ ಮನ್ನಾಕ್ಕೆ 6500 ಕೋಟಿ ರೂ. ಮೀಸಲಿಡಲಾಗಿದ್ದು, ಕೃಷಿ ಮತ್ತು ಸಂಬಂಧಿತ ಕ್ಷೇತ್ರಕ್ಕೆ 46,853 ಕೋಟಿ ರೂ. ಅನುದಾನ ನೀಡಲಾಗಿದೆ. ಜಿಎಸ್ಟಿ ಅಡಿಯಲ್ಲಿ 76,406 ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷಿತ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSbjpಬಿಜೆಪಿಜೆಡಿಎಸ್HD Kumaraswamyಸಿಎಂ ಕುಮಾರ ಸ್ವಾಮಿKarnataka Budget 2019ಕರ್ನಾಟಕ ಬಜೆಟ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


