ಕೇಂದ್ರ ಬಜೆಟ್

ಬಜೆಟ್ ನಲ್ಲಿ ರೈಲ್ವೆಗೆ 1.58 ಲಕ್ಷ ಕೋಟಿ, ಹಿಂದೆಂದಿಗಿಂತಲೂ ಹೆಚ್ಚು ಅನುದಾನ

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆಗೆ 1.58 ಲಕ್ಷ ...

ಬಜೆಟ್ ನಲ್ಲಿ ರೈಲ್ವೆಗೆ 1.58 ಲಕ್ಷ ಕೋಟಿ, ಹಿಂದೆಂದಿಗಿಂತಲೂ ಹೆಚ್ಚು ಅನುದಾನ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆಗೆ 1.58 ಲಕ್ಷ ಕೋಟಿ ರುಪಾಯಿ ಅನುದಾನ ನೀಡಿದ್ದು, ಇದು ಹಿಂದೆಂದಿಗಿಂತಲೂ ಹೆಚ್ಚು ಅನುದಾನವಾಗಿದೆ.
ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು, ರೈಲ್ವೆ ಇಲಾಖೆಯ ಇತಿಹಾಸದಲ್ಲಿಯೇ ಈ ವರ್ಷ ಅತ್ಯಂತ ಸುರಕ್ಷತಾ ವರ್ಷವಾಗಿದೆ ಎಂದರು.
2014ರಿಂದ ಮೋದಿ ಸರ್ಕಾರ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದು, ಈ ವರ್ಷ 1.58 ಲಕ್ಷ ಕೋಟಿ ರುಪಾಯಿ ಅನುದಾನ ನೀಡಲಾಗಿದೆ. ಈ ಮೂಲಕ ಹಿಂದೆಂದಿಗಿಂತಲೂ ಅತಿ ಹೆಚ್ಚಿನ ಆರ್ಥಿಕ ಬಲವನ್ನು ನೀಡಲಾಗಿದೆ ಎಂದು ಗೋಯಲ್ ಹೇಳಿದರು.
ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಸಕಾಷ್ಟದು ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ರೈಲ್ವೆಯ ಮೂಲ ಸೌಕರ್ಯಗಳನ್ನು ಮೇಲ್ದರ್ಜೆಗೆ ಹೇರಿಸಲಾಗಿದೆ. ಅಲ್ಲದೆ ದೇಶದ ಎಲ್ಲಾ ಮಾನವರಹಿತ ರೈಲ್ವೆ ಲೆವಲ್ ಕ್ರಾಸಿಂಗ್ ಗಳನ್ನು ಬಂದ್ ಮಾಡಲಾಗಿದೆ ಎಂದರು.
ರೈಲ್ವೆಗೆ ಹೆಚ್ಚಿನ ಬಂಡವಾಳ ಆಕರ್ಷಿಸುವುದಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಈಗಾಗಲೇ ಎಲ್ಲಾ ನಿಲ್ದಾಣಗಳಿಗೆ ಸಿಸಿ ಕ್ಯಾಮೆರಾ ಮತ್ತು ವೈಫೈ ಅಳವಡಿಸುವ ಕಾರ್ಯ ಚಾಲ್ತಿಯಲ್ಲಿದೆ. ವಂದೇ ಭಾರತ ಎಕ್ಸೆಪ್ರೆಸ್ ರೈಲು ಯೋಜನೆ ಮೋದಿ ಸರ್ಕಾರದ ಸಾಧನೆ ಎಂದು ಗೋಯಲ್ ಬಣ್ಣಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.