ಬಜೆಟ್ ಮಂಡನೆ ಹಿನ್ನೆಲೆ, ರಾಷ್ಟ್ರಪತಿ ಭೇಟಿಯಾದ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
Published On :
ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಸಂಪ್ರದಾಯದಂತೆ ಬಜೆಟ್ ಮಂಡನೆಗೂ ಮುನ್ನ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಷ್ಟ್ರಪತಿ ಭವನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಹ್ವಾನಿಸಿದ್ದರು ಎಂದರು ರಾಷ್ಟ್ರಪತಿ ಭವನದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.
ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಗೂರ್ ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಮೋದಿ 2.0 ಸರ್ಕಾರದ ಬಜೆಟ್ ನ್ನು ಕೆಲ ಹೊತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸ್ವಾತಂತ್ರ್ಯ ನಂತರ ಇಂದಿರಾಗಾಂಧಿ ನಂತರ ಎರಡನೇ ಮಹಿಳೆಯಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.
ಇದು 89ನೇ ಕೇಂದ್ರ ಬಜೆಟ್ ಆಗಿದ್ದು, ಸರ್ಕಾರದ ಹಣಕಾಸಿನ ಪರಿಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತದೆ. ಆದಾಯ ಹಾಗೂ ಮುಂದಿನ ವರ್ಷ ಮಾಡಲಾಗುವ ವೆಚ್ಚದ ಅಂದಾಜು ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiUnion BudgetNirmala Sitharamanನಿರ್ಮಲಾ ಸೀತಾರಾಮನ್ನವ ದೆಹಲಿPresident Ramanath Kovindರಾಷ್ಟ್ರಪತಿ ರಾಮನಾಥ್ ಕೋವಿಂದ್ಕೇಂದ್ರ ಬಜೆಟ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

