ಕೇಂದ್ರ ಬಜೆಟ್

2024ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನೀರು: ನಿರ್ಮಲಾ ಸೀತಾರಾಮನ್

2024ಕ್ಕೆ ಗ್ರಾಮದ ಎಲ್ಲಾ ಮನೆಗಳಿಗೆ ಜಲ ಜೀವನ ಯೋಜನೆಯಡಿ ನೀರು ಒದಗಿಸಲು ಜಲ ಶಕ್ತಿ ...

Published On :
ನವದೆಹಲಿ: 2024ಕ್ಕೆ ಗ್ರಾಮದ ಎಲ್ಲಾ ಮನೆಗಳಿಗೆ ಜಲ ಜೀವನ ಯೋಜನೆಯಡಿ ನೀರು ಒದಗಿಸಲು ಜಲ ಶಕ್ತಿ ಸಚಿವಾಲಯ ಮೂಲಕ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದಲ್ಲಿ ಪ್ರಸ್ತುತ ಇರುವ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಭಾರತೀಯರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಲಶಕ್ತಿ ಸಚಿವಾಲಯ ರಚನೆ ಪ್ರಮುಖ ಹೆಜ್ಜೆಯಾಗಿದೆ ಎಂದು ಸೀತಾರಾಮನ್ ಹೇಳಿದರು.
ನೀರಿನ ಸಂಪನ್ಮೂಲ ನಿರ್ವಹಣೆ ಮತ್ತು ಆಂತರಿಕ ಮತ್ತು ಹಂತಹಂತ ಮಾದರಿಯಲ್ಲಿ ನೀರಿನ ಪೂರೈಕೆ ಮಾಡಲು ಹೊಸ ಸಚಿವಾಲಯ ಕೆಲಸ ಮಾಡಲಿದ್ದು ಎಲ್ಲಾ ರಾಜ್ಯ ಸರ್ಕಾರಗಳ ಜೊತೆಗೆ ಪ್ರತಿ ಮನೆಗೆ ನೀರು ಒದಗಿಸಿ 2024ರ ಹೊತ್ತಿಗೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ನೀರು ಒದಗಿಸುವ ಭರವಸೆ ನೀಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.