ಕಾರ್ಮಿಕ ಸುಧಾರಣೆಗಳನ್ನು ಅನಾವರಣಗೊಳಿಸಿದ ನಿರ್ಮಾಲಾ ಸೀತಾರಾಮನ್: ವಿದೇಶಿ ಹೂಡಿಕೆ ಉತ್ತೇಜನಕ್ಕೆ ಪ್ರಸ್ತಾವನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಮಂಡಿಸಿದ ತಮ್ಮ ಚೊಚ್ಚಲ ಬಜೆಟ್; ನಲ್ಲಿ 2020ರ ವೇಳೆಗೆ ಭಾರತವನ್ನು 3 ಟ್ರಿಲಿಯನ್; ಆರ್ಥಿಕತೆಯನ್ನಾಗಿಸುವ, ಮುಂದಿನ ವರ್ಷಗಳಲ್ಲಿ 5 ಟ್ರಿಲಿಯನ್
Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಮಂಡಿಸಿದ ತಮ್ಮ ಚೊಚ್ಚಲ ಬಜೆಟ್; ನಲ್ಲಿ 2020ರ ವೇಳೆಗೆ ಭಾರತವನ್ನು 3 ಟ್ರಿಲಿಯನ್; ಆರ್ಥಿಕತೆಯನ್ನಾಗಿಸುವ, ಮುಂದಿನ ವರ್ಷಗಳಲ್ಲಿ 5 ಟ್ರಿಲಿಯನ್ ; ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ವಿಶಾಲ ಮಾರ್ಗನಕ್ಷೆ ಮುಂದಿಟ್ಟಿದ್ದಾರೆ.
ದೇಶೀಯ ಮತ್ತು ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲು ಕೆಲ ಬದಲಾವಣೆಗಳನ್ನು ಪ್ರಸ್ತಾಪಿಸಿದ ಸಚಿವರು ನೀರು ಮತ್ತು ಅನಿಲ ಗ್ರಿಡ್ ಹಾಗೂ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ನೀಲನಕ್ಷೆ ರೂಪಿಸುವುದಾಗಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಮಂಡಿಸಲಾದ 2019-20ರ ಬಜೆಟ್ ಪ್ರಸ್ತಾವನೆಯಲ್ಲಿ, ಸರ್ಕಾರ ಅನೇಕ ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಕೇತಗಳ ಗುಂಪಾಗಿ ಸುಗಮಗೊಳಿಸುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.
ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್ ಮತ್ತು 3 ಡಿ ಮುದ್ರಣದಂತಹ ಹೊಸ ಯುಗದ ಕೌಶಲ್ಯಗಳಲ್ಲಿ ತರಬೇತಿ ನೀಡುವುದಕ್ಕೆ ಸರ್ಕಾರ ಗಮನ ಹರಿಸಲಿದೆ ಎಂದು ಅವರು ಹೇಳಿದರು.
ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ, ವಿಮಾನಯಾನ, ಮಾಧ್ಯಮ, ಅನಿಮೇಷನ್ ಮತ್ತು ವಿಮಾ ವಲಯಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಸುಧಾರಣೆಗಳನ್ನು ತಂದು ಉದಾರೀಕರಣಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರ (ಐಎಫ್;ಎಸ್;ಸಿ)ಗಳನ್ನು ಹೆಚ್ಚಿಸಲು ಮತ್ತು ಸಾಲ ಖಾತರಿ ನಿಗಮವನ್ನು ಸ್ಥಾಪಿಸಲು ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಸಾಮಾಜಿಕ ಉದ್ಯಮಗಳು ಮತ್ತು ಸ್ವಯಂಸೇವಾ ಸಂಸ್ಥೆಗಳಿಗೆ ವಿದ್ಯುನ್ಮಾನ ನಿಧಿ ಸಂಗ್ರಹ ಯೋಜನೆ ಆರಂಭಿಸಲಾಗುವುದು. ಕೆಲ ಕಂಪನಿಗಳಲ್ಲಿ ವಿದೇಶಿ ಹೂಡಿಕೆಗೆ ಶಾಸನಬದ್ಧ ಮಿತಿಗಳನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ 1,05,000 ಕೋಟಿ ರೂ.ಮೊತ್ತದ ಬಂಡವಾಳ ಹಿಂತೆಗೆತ ಗುರಿಯನ್ನು ಹೊಂದಿದೆ. ಅಲ್ಲದೆ, ರೈಲ್ವೆ ನಿಲ್ದಾಣ ಆಧುನೀಕರಣದ ಬೃಹತ್; ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಮಾರುಕಟ್ಟೆ ಸುಧಾರಣೆಗಳನ್ನು ಸಾಧಿಸುವ ಗುರಿಯ ಕ್ರಮಗಳನ್ನು ಅನಾವರಣಗೊಳಿಸಿದ ಸಚಿವರು, ಕನಿಷ್ಠ ಸಾರ್ವಜನಿಕ ಪಾಲುದಾರಿಕೆಯನ್ನು ಶೇ.25 ರಿಂದ ಶೇ 35 ಕ್ಕೆ ಏರಿಸುವುದರ ಕುರಿತು ಷೇರು ವಿನಿಮಯ ಮಂಡಳಿ ಮೌಲ್ಯಮಾಪನ ಮಾಡಲಿದೆ. 2019-20ರಲ್ಲಿ ಸಾಲ ಖಾತರಿ ನಿಗಮವನ್ನು ಸ್ಥಾಪಿಸಲಾಗುವುದು. ಮೂಲ ಸೌಕರ್ಯ ವಲಯವನ್ನು ವಿಶೇಷವಾಗಿ ಗಮನದಲ್ಲಿಟ್ಟುಕೊಂಡು ದೀರ್ಘಕಾಲೀನ ಬಾಂಡ್;ಗಳಿಗಾಗಿ ಮಾರುಕಟ್ಟೆಗಳನ್ನು ವಿಸ್ತಾರಗೊಳಿಸು ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಎಂದು ಹಣಕಾಸು ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?

