ಕೇಂದ್ರ ಬಜೆಟ್

26 ಸಂಸದರಿದ್ದರೂ ರಾಜ್ಯಕ್ಕೆ ದೊಡ್ಡ ನಷ್ಟ: ಪ್ರಿಯಾಂಕ ಖರ್ಗೆ

ರಾಜ್ಯದಲ್ಲಿ 26 ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅತಿದೊಡ್ಡ ನಷ್ಟವಾದಂತೆ ಕಾಣಿಸುತ್ತಿದೆ ಎಂದು ...

26 ಸಂಸದರಿದ್ದರೂ ರಾಜ್ಯಕ್ಕೆ ದೊಡ್ಡ ನಷ್ಟ: ಪ್ರಿಯಾಂಕ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Published On :
ಕಲಬುರಗಿ: ರಾಜ್ಯದಲ್ಲಿ 26 ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅತಿದೊಡ್ಡ ನಷ್ಟವಾದಂತೆ ಕಾಣಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಬಜೆಟ್ ಕುರಿತು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಬಾರಿಯ ಕೇಂದ್ರ ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ. ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಆದರೆ ತೆರಿಗೆಗೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ ಏನ್ನನೂ ನೀಡಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಭಾರೀ ನಿರೀಕ್ಷೆ ಇತ್ತು. 26 ಬಿಜೆಪಿ ಸಂಸದರಿದ್ದರೂ ಬಜೆಟ್‍ನಲ್ಲಿ ರಾಜ್ಯವು ಸೋತಂತೆ ಆಗಿದೆ ಎಂದು ನಿರಾಸೆ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.