ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ'; ಯಡಿಯೂರಪ್ಪ
ಕ್ಷಣವನ್ನು ಸರಳವಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಬ್ಯಾಗ್ ಗಳ ಭಾರವನ್ನು ಕಡಿಮೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಪ್ರತಿ ತಿಂಗಳಿನ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ 'ಸಂಭ್ರಮ ಶನಿವಾರ' ಆಚರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಬೆಂಗಳೂರು: ಶಿಕ್ಷಣವನ್ನು ಸರಳವಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಬ್ಯಾಗ್ ಗಳ ಭಾರವನ್ನು ಕಡಿಮೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಪ್ರತಿ ತಿಂಗಳಿನ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ 'ಸಂಭ್ರಮ ಶನಿವಾರ' ಆಚರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸಿದ ಯಡಿಯೂರಪ್ಪ, ಸಂಭ್ರಮ ಶನಿವಾರದಂದು ಮಕ್ಕಳಿಗೆ ಚಟುವಟಿಕೆಗಳಿಗೆ ಮೂಲಕ ದೇಶದ ಉತ್ತಮ ನಾಗರಿಕರಾಗಲು ಅವಶ್ಯವಿರುವ ವಿಷಯಗಳ ಕುರಿತು ಅರಿವು ಮೂಡಿಸಲಾಗುವುದು ಎಂದರು.
ಕಳೆದ ವರ್ಷ ಸಂಭವಿಸಿದ ಭೀಕರ ಅತಿವೃಷ್ಠಿಯಿಂದ ಹಲವು ಶಾಲಾ ಕೊಠಡಿಗಳು ತೀವ್ರವಾಗಿ ಹಾನಿಗೊಳಗಾಗಿವೆ. ನಬಾರ್ಡ್ ಯೋಜನೆಯಡಿ 758 ಕೋಟಿ ರೂ. ವೆಚ್ಚದಲ್ಲಿ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಶಾಸಕರಿಂದ ಶಾಲೆಗಳ ದತ್ತು:
ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಮೂರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಸೂಚಿಸಲಾಗುವುದು. ಇದಕ್ಕಾಗಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು.
ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ ಒದಗಿಸಲಾಗುವುದು. 2020-21ನೇ ಸಾಲಿನಲ್ಲಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದುವಿನೊಂದಿಗೆ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಕಟಿಸಿದರು.
ರಾಜ್ಯದ ಉನ್ನತ ಶಿಕ್ಷಣದ ನಿವ್ವಳ ನೋಂದಣಿ ಅನುಪಾತ ಹೆಚ್ಚಿಸಲು ಇಂಟರಾಕ್ಟೀವ್ ಆನ್ -ಲೈನ್ ಕೋರ್ಸ್ ಗಳನ್ನು ಆರಂಭಿಸಲಾಗುವುದು. ಇದರ ಇ-ಕಂಟೆಂಟ್ ತಯಾರಿಗೆ ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಏಷ್ಯಾ ಖಂಡದ ವಿವಿಧ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು ಎಂದು ಪ್ರಕಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


