ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿ

ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿರೀಕ್ಷೆಯಂತೆಯೇ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.

ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿರೀಕ್ಷೆಯಂತೆಯೇ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಯೋಜನೆಗಳ ಕುರಿತು ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿದ ಬಿಎಸ್ ವೈ ಅವರು, 'ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಅಲ್ಲದೆ ಶಿಕ್ಷಕರಿಗೆ ಎಲ್ಲ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಕ್ರಮ. ಶಿಕ್ಷಕರಿಗಾಗಿ ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಇದಲ್ಲದೆ ತೀವ್ರ ಕುತೂಹಲ ಕೆರಳಿಸಿದ್ದ ಪಬ್ಲಿಕ್ ಶಾಲಾ ಯೋಜನೆಗೆ ಸಿಎಂ ಬಿಎಸ್ ವೈ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದು, ಇದರಿಂದ ಹಾಲಿ ವರ್ಷ 276 ಪಬ್ಲಿಕ್ ಶಾಲೆಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಉಳಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳ ಪಟ್ಟಿ ಇಂತಿದೆ.
-ಅಲ್ಪಸಂಖ್ಯಾತರ ಇಲಾಖೆ ನಿರ್ವಹಿಸುತ್ತಿರುವ 5 ಮೊರಾರ್ಜಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ.
-ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 2 ಲಕ್ಷ ಮನೆಗಳ ನಿರ್ಮಾಣಕ್ಕೆ ₹ 1500 ಕೋಟಿ ಒದಗಿಸಲು ಕ್ರಮ.
-ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲ ಸೌಕರ್ಯ ವೃದ್ಧಿಗೆ ಕ್ರಮ.
-ಮಕ್ಕಳು ಪಠ್ಯವನ್ನು ಉಲ್ಲಾಸದಿಂದ ಕಲಿಯುವಂತೆ ಮಾಡಲು ತಿಂಗಳಲ್ಲಿ 2 ದಿನ ಬ್ಯಾಗ್‌ ರಹಿತ ದಿನವಾಗಿ ಮಾಡಲು ಸೂಚನೆ.
-ಸ್ಕೌಟ್ಸ್‌ ಮತ್ತು ಗೈಡ್ಸ್‌ ಕೇಂದ್ರಗಳಿಗೆ 4 ಕೋಟಿ ರೂಪಾಯಿ ಅನುದಾನ.
-ಶಿಕ್ಷಕರಿಗೆ ಎಲ್ಲ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಕ್ರಮ. ಶಿಕ್ಷಕರಿಗಾಗಿ ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿಪಡಿಸಲು ಕ್ರಮ.
-ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25ರಷ್ಟು ಸ್ಥಾನ ಮೀಸಲು; ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸ್ಥಾನಗಳನ್ನು ಮೀಸಲಿಡಲು ಕ್ರಮ.
-ಬ್ರೈಲ್‌ ಕಂ ಟಾಕಿಂಗ್‌ ಲೈಬ್ರರಿ ಸ್ಥಾಪನೆ: ಬೆಂಗಳೂರು ಮತ್ತು ಕಲಬುರ್ಗಿಯಲ್ಲಿ ಬ್ರೈಲ್‌ ಕಂ ಟಾಕಿಂಗ್‌ ಲೈಬ್ರರಿ ಸ್ಥಾಪನೆಗೆ ₹ 30 ಲಕ್ಷ ಮೀಸಲು. ಮೈಸೂರಿನ ಬ್ರೈಲ್‌ ಮುದ್ರಣಾಲಯದಲ್ಲಿ ₹ 80 ಲಕ್ಷ ವೆಚ್ಚದ ಹೊಸ ಮುದ್ರಣ ಯಂತ್ರ ಸ್ಥಾಪನೆ.
-‘ಉಪಕಾರ’ ಯೋಜನೆ ಘೋಷಣೆ; ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವರವರಿಗೆ ಜೀವನೋಪಾಯ ರೂಪಿಸಿಕೊಳ್ಳಲು ತಿಂಗಳಿಗೆ ₹ 5000 ಆರ್ಥಿಕ ನೆರವು ನೀಡುವ ‘ಉಪಕಾರ’ ಯೋಜನೆ.-ಮಕ್ಕಳಿಗೆ ಪಠ್ಯದ ಹೊರೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ
-ತಿಂಗಳ ಎರಡು ಶನಿವಾರಗಳನ್ನು ಬ್ಯಾಗ್ ರಹಿತ ದಿನವೆಂದು ಘೋಷಣೆ ಸಂಭ್ರಮ‌ ಶನಿವಾರ ಎಂದು ಆಚರಣೆ
-400 ಉರ್ದು ಶಾಲೆಗಳಲ್ಲಿ ಉರ್ದು ಮಾದ್ಯಮದೊಂದಿಗೆ ಆಂಗ್ಲ ಮಾದ್ಯಮ ಆರಂಭ
-ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಗೆ 10 ಕೋಟಿ
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.