ರಾಜ್ಯ ಬಜೆಟ್

ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ

ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್ 
ಬಿ. ಸಿ. ಪಾಟೀಲ್
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ

ಆಯವ್ಯಯ ಮಂಡನೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದ ರೈತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಭಾವಚಿತ್ರಯುಕ್ತ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಜಾರಿಗೆ ತರಲಾಗಿದೆ‌.ಹನಿ ನೀರಾವರಿಗೆ ಆದ್ಯತೆ ನೀಡಿದ್ದಾರೆ.
ಫಸಲ್ ಭೀಮಾ ಯೋಜನೆಗೆ 900ಕೋಟಿ ಹಣ ಮೀಸಲಿಟ್ಟಿದ್ದಾರೆ‌ ಎಂದು ತಿಳಿಸಿದರು.

ಫಸಲ್ ಭೀಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು 900ಕೋಟಿ ರೂ.ಬಿಡುಗಡೆಯಾಗಿದೆ .ರೈತರ ಮನೆಬಾಗಿಲಿನಲ್ಲಿಯೇ  ಮಣ್ಣು,ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಆರಂಭಿಸಲಾಗುವುದು ಎಂದರು.

ಸಾವಯವ ಕೃಷಿಯನ್ನು ಪ್ರೋತ್ಸಾಹಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.ಒಟ್ಟಾರೆಯಾಗಿ ರೈತರ ಆದಾಯ ದ್ವಿಗುಣಗೊಳಿಸಲು ಅನ್ನದಾತರ ಬದುಕನ್ನು ಹಸನುಮಾಡಲು ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದೆ .ಇನ್ನಷ್ಟು ಹೊಸಹೊಸ ಯೋಜನೆಗಳನ್ನು ಹಾಗೂ ರೈತರಿಗಾಗಿ ಪ್ರಾತ್ಯಕ್ಷಿಕೆಗಳನ್ನು ಸಹ ಮಾಡಲಾಗುವುದು ಎಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.