ಕೇಂದ್ರ ಬಜೆಟ್ 2020: 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ 'ಭಾರತ್ ನೆಟ್'
2020ನೇ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸೇವೆ ಕಲ್ಪಿಸುವ 'ಭಾರತ್ ನೆಟ್' ಯೋಜನೆ ಘೋಷಣೆ ಮಾಡಿದ್ದಾರೆ.

ನವದೆಹಲಿ: 2020ನೇ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸೇವೆ ಕಲ್ಪಿಸುವ 'ಭಾರತ್ ನೆಟ್' ಯೋಜನೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ನಿರ್ಮಲಾ ಅವರು, 'ಹೊಸ ಆರ್ಥಿಕ ವ್ಯವಸ್ಥೆ ಬರುತ್ತಿರುವುದರಿಂದ ಸಾಂಪ್ರದಾಯಿಕ ವ್ಯವಸ್ಥೆ ಅಲುಗಾಡುತ್ತಿದೆ. ದತ್ತಾಂಶ ವಿಶ್ಲೇಷಣೆ ಮತ್ತು ಇಂಟರ್ನೆಟ್ ಬಳಕೆ ನಮ್ಮ ಬದುಕುಗಳನ್ನು ಬದಲಿಸುತ್ತಿದೆ. ಖಾಸಗಿ ಕ್ಷೇತ್ರಗಳು ದೇಶದಾದ್ಯಂತ ಡೇಟಾ ಸೆಂಟರ್ ಪಾರ್ಕ್ ರೂಪಿಸಲು ನೀತಿಯೊಂದನ್ನು ರೂಪಿಸುತ್ತೇವೆ ಎಂದು ಹೇಳಿದರು.
ಅಂತೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಚೆ ಕಚೇರಿಯಿಂದ ಪೊಲೀಸ್ ವ್ಯವಸ್ಥೆಯವರೆಗೆ ಎಲ್ಲ ಸೇವೆಗಳು ಡಿಜಿಟಲೀಕರಣಗೊಳ್ಳಲಿದೆ. ದೇಶದ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಭಾರತ್ ನೆಟ್ ಕಾರ್ಯಕ್ರಮದ ಮೂಲಕ ಒಎಫ್‌ಸಿ ಸಂಪರ್ಕ ಒದಗಿಸಲಾಗುವುದು. ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗಾಗಿ 8,000 ಕೋಟಿ ರೂ ಮೀಸಲಿಡುವುದಾಗಿ ಮತ್ತು ಅಂಗನವಾಡಿಗಳಿಗೆ ಇಂಟರ್ನೆಟ್ ಸಂಪರ್ಕ ಕಲ್ಪಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


