ಕೇಂದ್ರ ಬಜೆಟ್

ಕೇಂದ್ರ ಬಜೆಟ್ ಫೆ.1ಕ್ಕೆ ಮಂಡನೆ, ಜ.31ರಿಂದ ಬಜೆಟ್ ಅಧಿವೇಶನ 

ಸಂಸತ್ತಿನ ಬಜೆಟ್ ಅಧಿವೇಶನ ಈ ವರ್ಷ ಎರಡು ಹಂತಗಳಲ್ಲಿ ಜನವರಿ 31ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ.

ಕೇಂದ್ರ ಬಜೆಟ್ ಫೆ.1ಕ್ಕೆ ಮಂಡನೆ, ಜ.31ರಿಂದ ಬಜೆಟ್ ಅಧಿವೇಶನ 
ಸಂಸತ್ತು
Published On :

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಈ ವರ್ಷ ಎರಡು ಹಂತಗಳಲ್ಲಿ ಜನವರಿ 31ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ.


ಬಿಜೆಪಿ ನೇತೃತ್ವದ ಎನ್ ಡಿಎ-2 ಸರ್ಕಾರದ ಪೂರ್ಣ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. 2020-21ನೇ ಸಾಲಿನ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಮೊದಲ ಹಂತದ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 11ರವರೆಗೆ ನಡೆಯಲಿದೆ.


ನಂತರ ಅಲ್ಪ ವಿರಾಮದ ಬಳಿಕ ಎರಡನೇ ಹಂತದ ಅಧಿವೇಶನ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಭೇಟಿ ಮಾಡಿ ಬಜೆಟ್ ಅಧಿವೇಶನದ ವೇಳಾಪಟ್ಟಿಯನ್ನು ಶಿಫಾರಸು ಮಾಡಿದೆ.  


ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ಪ್ರತಿಭಟನೆಗಳ ಮಧ್ಯೆ ಬಜೆಟ್ ಅಧಿವೇಶನ ಮಹತ್ವ ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.