ಕೇಂದ್ರ ಬಜೆಟ್ 2021-2022: ಬೆಂಗಳೂರು ನಮ್ಮ ಮೆಟ್ರೋಗೆ ರೂ.14,788 ಕೋಟಿ ಅನುದಾನ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಲ್ಲಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಲ್ಲಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್ ಅವರು ಕ್ಷೇತ್ರವಾರು ಅನುದಾನದ ವಿವರಗಳನ್ನು ನೀಡುತ್ತಿದ್ದಾರೆ. ಈ ಪೈಕಿ ಬೆಂಗಳೂರು ಮೆಟ್ರೋಗೆ ರೂ.14,788 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ.
ರೈಲ್ವೇ ಬಜೆಟ್'ಗೆ ವಿಶೇಶ ಅನುದಾನ ನೀಡಿರುವ ಸೀತಾರಾಮ್ ಅವರು ರೈಲ್ವೇ ಮಿಷನ್ 2030 ಯೋಜನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಚ್ಚಿನ ಅನುದಾನ ಘೋಷಣೆ ಮಾಡಿದ್ದಾರೆ.
ಭವಿಷ್ಯಕ್ಕೆ ಸಿದ್ಧವಾಗಿರುವ ರೈಲ್ವೆ ವ್ಯವಸ್ಥೆಯನ್ನು ನಾವು ರೂಪಿಸುತ್ತೇವೆ. ಜೂನ್ 2022ರ ಒಳಗೆ ಎರಡು ಕಾರಿಡಾರ್ ಪೂರ್ಣಗೊಳಿಸುತ್ತೇವೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೆಲ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ.
ನಾಲ್ಕು ಹೊಸ ರೈಲ್ವೆ ಕಾರಿಡಾರ್ ಯೋಜನೆಗಳ ಘೋಷಣೆ ಮಾಡಲಾಗಿದ್ದು, ಈ ವರ್ಷ 46,000 ಕಿ.ಮೀ. ಬ್ರಾಡ್ಗೇಜ್ ಹಳಿ ಪರಿವರ್ತನೆ ಮಾಡಲಾಗುತ್ತದೆ. 2023ರ ಡಿಸೆಂಬರ್ ಒಳಗೆ ಎಲ್ಲ ಬ್ರಾಡ್ಗೇಜ್ ಹಳಿಗಳ ವಿದ್ಯುದೀಕರಣ ಪೂರ್ಣಗೊಳಿಸಿ, ಹೆಚ್ಚು ಬೇಡಿಕೆಯಲ್ಲಿರುವ ಮತ್ತು ಹೆಚ್ಚು ರೈಲು ಸಂಚಾರ ವಿರುವ ಮಾರ್ಗಗಳಲ್ಲಿ ಸ್ವಯಂಚಾಲಿತ ರಕ್ಷಣಾ ವ್ಯವಸ್ಥೆಯನ್ನು ಜಾರಿಗೊಳಿಸುತ್ತೇವೆ. ಬೆಂಗಳೂರು ನಮ್ಮ ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ರೂ. 14,788 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


