ದೆಹಲಿಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಣರಾಯ್ ವಿಜಯನ್ ಗೈರು!
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯನ್ನು ಬಹಿಷ್ಕರಿಸಿಲ್ಲ, ಆದರೆ ಮೈಸೂರಿನಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಭಾಗವಹಿಸುತ್ತಿಲ್ಲ. ನೀತಿ ಆಯೋಗದ ಆಡಳಿತ ಮಂಡಳಿ ಸಭೆಗೆ ತಮ್ಮ ಭಾಷಣವನ್ನು ಕಳುಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


