ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್ ಪರಿಶಿಷ್ಠ ಜಾತಿ- ಪರಿಶಿಷ್ಠ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್
ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ.

ಬೆಂಗಳೂರು: ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದರು.
ಗೃಹಬಳಕೆಗೆ ವಿದ್ಯುತ್ ಬಳಸುತ್ತಿರುವ ಕುಟುಂಬದವರು ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ ಮಂಜೂರು, ಎಸ್ಸಿ-ಎಸ್ಟಿ ನಿಗಮಗಳಿಗೆ 795 ಕೋಟಿ ರೂ. ಮೀಸಲಿಡುವುದಾಗಿ ಬೊಮ್ಮಾಯಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


