ರಾಜ್ಯ ಬಜೆಟ್

ಜನರ ಕಿವಿ ಮೇಲೆ ಹೂ ಇಟ್ಟಿದ್ದಾರೆ: ಸಿದ್ದರಾಮಯ್ಯ ಬಜೆಟ್‌ಗೆ ಕುಮಾರಸ್ವಾಮಿ ವ್ಯಂಗ್ಯ

ಕಳೆದ ಬಾರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್‌ಗೆ ಕಾಂಗ್ರೆಸ್ ನವರು ಕಿವಿಯಲ್ಲಿ ಚೆಂಡು ಹೂ ಇಟ್ಕೊಂಡು ಬಂದಿದ್ದರು. ಈಗ ಆರು ಕೋಟಿ ಜನರ ಕಿವಿಗೆ ಇವರೇ ಹೂ ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ...

ಜನರ ಕಿವಿ ಮೇಲೆ ಹೂ ಇಟ್ಟಿದ್ದಾರೆ: ಸಿದ್ದರಾಮಯ್ಯ ಬಜೆಟ್‌ಗೆ ಕುಮಾರಸ್ವಾಮಿ ವ್ಯಂಗ್ಯ
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಕಳೆದ ಬಾರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್‌ಗೆ ಕಾಂಗ್ರೆಸ್ ನವರು ಕಿವಿಯಲ್ಲಿ ಚೆಂಡು ಹೂ ಇಟ್ಕೊಂಡು ಬಂದಿದ್ದರು. ಈಗ ಆರು ಕೋಟಿ ಜನರ ಕಿವಿಗೆ ಇವರೇ ಹೂ ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ಅನ್ನು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಬಜೆಟ್ ಮಂಡನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‌ಡಿಕೆ, ಇವತ್ತಿನ ಬಜೆಟ್ ಟೀಕೆ ಮಾಡುವ ಬಜೆಟ್ ಆಗಿದೆ. ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ ಎಂದರು.

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಮತ್ತು ಹಿಂದಿನ ರಾಜ್ಯ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದು. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದರು.

ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್. ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ ಮಾಡಿಕೊಳ್ಳಲು ಮಂಡಿಸಿದ ದಾಖಲೆಯ ಬಜೆಟ್ ಅಷ್ಟೇ ಇದು ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಆರೋಗ್ಯ ಕ್ಷೇತ್ರ, ಶಿಕ್ಷಣ ಕ್ಷೇತ್ರ ಅತ್ಯಂತ ಪ್ರಮುಖವಾದದ್ದು. ಹೀಗಾಗಿ ಈ ಬಜೆಟ್‌ನಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.