ಈ ವರ್ಷವೇ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ....

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆಯಾಗಿದೆ.
ಬಜೆಟ್ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದ ಬಜೆಟ್ ಮಂಡನೆಯ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಬಜೆಟ್ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ ಎಂದರು.
7ನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ವರದಿ ಜಾರಿಗಾಗಿ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ತಿಳಿಸಿದರು.
ಈಗ 2023-24 ರ ಬಜೆಟ್ ಮಂಡನೆ ಮಾಡಿದ್ದೇನೆ. ಕೋವಿಡ್ ಕಾಲದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿತ್ತು. ಕರ್ನಾಟಕ ಬಜೆಟ್ ಸಮಾನ್ಯ ವರ್ಷಗಳಂತೆ ಹಳಿಗೆ ಬರಲು 5-6 ವರ್ಷಗಳು ಬೇಕು ಎಂದು ಆರ್ಥಿಕ ತಜ್ಞರು ಹೇಳಿದ್ದರು. ಆದರೆ, ಕೇವಲ ಎರಡೇ ವರ್ಷ ದಲ್ಲಿ ಸುಧಾರಣೆ ಆಗಿದೆ. ನಮ್ಮ ಆರ್ಥಿಕ ಕ್ಷಮತೆಯ ಮೇಲೆ ವಿಶ್ವಾಸ ಬಂದಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


