ಕೇಂದ್ರ ಬಜೆಟ್ 2023: ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರ 5 ಮುಖ್ಯ ಘೋಷಣೆಗಳು
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ -2023ರಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಅವರು ಹೇಳಿರುವ ಪ್ರಮುಖಾಂಶಗಳು ಹೀಗಿವೆ.

ನವದೆಹಲಿ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ -2023ರಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಅವರು ಹೇಳಿರುವ ಪ್ರಮುಖಾಂಶಗಳು ಹೀಗಿವೆ.
ತಾಮ್ರದ ತುಣುಕಿನ ಮೇಲೆ 2.5 ಶೇಕಡಾ ರಿಯಾಯಿತಿಯ ಮೂಲ ಕಸ್ಟಮ್ಸ್ ಸುಂಕವನ್ನು ಮುಂದುವರಿಸಲು ಸರ್ಕಾರ ನಿರ್ಧಾರ, ಸಿಗರೇಟ್ ಮೇಲಿನ ತೆರಿಗೆ ಶೇ.16ರಷ್ಟು ಏರಿಕೆಯಾಗಿದೆ.
ಸಂಯೋಜಿತ ರಬ್ಬರ್ ಮೇಲಿನ ಮೂಲ ಆಮದು ಸುಂಕವನ್ನು 10 ಶೇಕಡಾದಿಂದ 25 ಶೇಕಡಾಕ್ಕೆ ಹೆಚ್ಚಿಸಲಾಗಿದೆ
ಅಡುಗೆಮನೆಯ ಎಲೆಕ್ಟ್ರಿಕ್ ಚಿಮಣಿಯ ಮೇಲಿನ ಕಸ್ಟಮ್ಸ್ ಸುಂಕವು ಶೇಕಡಾ 15ರಿಂದ ಶೇಕಡಾ 75ಕ್ಕೆ ಏರಿಕೆ
ಚಿನ್ನದ ಕಡ್ಡಿಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮೂಲ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲಾಗಿದೆ
ಟಿವಿ ಪ್ಯಾನಲ್ಗಳ ತೆರೆದ ಕೋಶಗಳ ಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 2.5 ಕ್ಕೆ ಇಳಿಸಲಾಗಿದೆ.
ಇನ್ನು ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಘೋಷಿಸಿರುವ 5 ಅಂಶಗಳು ಹೀಗಿವೆ:
1) ವಿನಾಯ್ತಿ: 7 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡುವ ಬಗ್ಗೆ ಪ್ರಸ್ತಾಪಿಸಿದರು.
2) ಟ್ಯಾಕ್ಸ್ ಸ್ಲ್ಯಾಬ್ಗಳು: ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್ ಸ್ಲ್ಯಾಬ್ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದೆ. 3 ಲಕ್ಷದಿಂದ ತೆರಿಗೆ ಹಂತ ಆರಂಭವಾಗಲಿದೆ.
3) ಸ್ಟಾಂಡರ್ಡ್ ಡಿಡಕ್ಷನ್: 15.5 ಲಕ್ಷ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ 52,500 ಸ್ಟಾಂಡರ್ಡ್ ಡಿಡಕ್ಷನ್ ಸೌಲಭ್ಯ ಸಿಗಲಿದೆ.
4) ಗರಿಷ್ಠ ತೆರಿಗೆ: ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ. ಈ ಬೆಳವಣಿಗೆಯೊಂದಿಗೆ ದೇಶದಲ್ಲಿರುವ ಗರಿಷ್ಠ ತೆರಿಗೆ ದರವು ಶೇ 39ಕ್ಕೆ ಮಿತಗೊಳ್ಳಲಿದೆ.
5) ಲೀವ್ ಎನ್ಕ್ಯಾಶ್ಮೆಂಟ್ (ರಜೆ ನಗದೀಕರಣ): ನಿವೃತ್ತರಾದಾಗ ಸಿಗುವ ರಜೆ ನಗದೀಕರಣ (ಲೀವ್ ಎನ್ಕ್ಯಾಶ್ಮೆಂಟ್) ಸೌಲಭ್ಯದ ಮೇಲೆ ಈವರೆಗೆ 3 ಲಕ್ಷಕ್ಕೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು 25 ಲಕ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


