'ವಿಪ್ರೋ'ಗೆ ರು. 6,635 ಕೋಟಿ ನಿವ್ವಳ ಲಾಭ
ಮಾಹಿತಿ ತಂತ್ರಜ್ಞಾನ ಸಂಸ್ಥೆ 'ವಿಪ್ರೋ' ನಾಲ್ಕನೇ ತ್ರೈಮಾಸಿಕದಲ್ಲಿ ರು. 1,729 ಕೋಟಿ ನಿವ್ವಳ ಲಾಭ...
ಕ.ಪ್ರ.ವಾರ್ತೆ, ಬೆಂಗಳೂರು, ಏ.19-
ಮಾಹಿತಿ ತಂತ್ರಜ್ಞಾನ ಸಂಸ್ಥೆ 'ವಿಪ್ರೋ' ನಾಲ್ಕನೇ ತ್ರೈಮಾಸಿಕದಲ್ಲಿ ರು. 1,729 ಕೋಟಿ ನಿವ್ವಳ ಲಾಭ ಗಳಿಸುವ ಜತೆಗೆ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಒಟ್ಟು ರು. 6,635 ನಿವ್ವಳ ಲಾಭ ಗಳಿಸಿದ್ದು, ವಾರ್ಷಿಕವಾಗಿ ಶೇ. 19ರಷ್ಟು ಪ್ರಗತಿ ಸಾಧಿಸಿದೆ.
ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಅವರು ನಗರದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಪ್ರಸಕ್ತ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ಸಂಸ್ಥೆ ನಿವ್ವಳ ರು. 1,729 ಕೋಟಿ ಲಾಭ ಗಳಿಸುವ ಮೂಲಕ ಶೇ. 17ರಷ್ಟು ಪ್ರಗತಿ ಸಾಧಿಸಿದೆ. 2013-14ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ರು. 1,575 ರಿಂದ ರು. 1,625 ಕೋಟಿ ಲಾಭ ನಿರೀಕ್ಷಿಸಲಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಆದರೆ 2012-13ನೇ ಸಾಲಿನಲ್ಲಿ ಸಂಸ್ಥೆ ಒಟ್ಟು ರು. 6,635 ನಿವ್ವಳ ಲಾಭ ಗಳಿಸಿದ್ದು, ವಾರ್ಷಿಕವಾಗಿ ಶೇ. 19ರಷ್ಟು ಪ್ರಗತಿ ಸಾಧಿಸಿದೆ. ಜತೆಗೆ ಐಟಿ ಸೇವೆಗಳ ಮೇಲಿನ ಆದಾಯ ರು. 33,843 ಕೋಟಿಯಾಗಿದ್ದು, ಶೇ. 13ರಷ್ಟು ಪ್ರಗತಿ ಕಂಡಿದೆ. ಅಲ್ಲದೆ, ಐಟಿ ಉತ್ಪನ್ನಗಳ ಮೇಲಿನ ಆದಾಯದಲ್ಲೂ ಶೇ. 15ರಷ್ಟು ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಕೆ.ಕುರೇನ್, ಮುಖ್ಯ ಹಣಕಾಸು ಅಧಿಕಾರಿ ಸುರೇಶ್ ಸೇನಾಪತಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

