ಡಿಯರ್‌ಬಾರ್ನ್ ಸಂಸ್ಥೆ ಸ್ವಾಧೀನಕ್ಕೆ ಒಪ್ಪಂದ
ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್ ಸಂಸ್ಥೆ ಡಿಯರ್‌ಬಾರ್ನ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಸ್ವಾಧೀನಕ್ಕೆ ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.
ಬೆಂಗಳೂರು: ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್ ಸಂಸ್ಥೆ ಡಿಯರ್‌ಬಾರ್ನ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಸ್ವಾಧೀನಕ್ಕೆ ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.
ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್ ಅಧ್ಯಕ್ಷ ಎಂ.ಪಿ.ಕುಮಾರ್ ಅವರು ನಗರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್ ಸಂಸ್ಥೆಯು ಡಿಯರ್‌ಬಾರ್ನ್ ಸಂಸ್ಥೆಯ ಶೇ. 100ರಷ್ಟು ಷೇರುಗಳನ್ನು ಪಡೆದುಕೊಳ್ಳುವ ಒಪ್ಪಂದಕ್ಕೆ ಸಹಿ ಮಾಡಿದ್ದು, ಆ ಕುರಿತ ಎಲ್ಲ ಕಾನೂನು ಪ್ರಕ್ರಿಯೆಗಳು ಇನ್ನೆರಡು ತಿಂಗಳಲ್ಲಿ ಮುಗಿಯಲಿವೆ. ಆದರೆ, ಆ ಬಳಿಕ ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್‌ನ ಅಂಗಸಂಸ್ಥೆಯಾಗುವ ಡಿಯರ್‌ಬಾರ್ನ್ ಪ್ರತ್ಯೇಕವಾಗಿ ತನ್ನ ಅಸ್ತಿತ್ವ ಮುಂದುವರಿಸಿಕೊಂಡು ಹೋಗಲಿದೆ ಎಂದು ಅವರು ತಿಳಿಸಿದರು.
ಸಂಸ್ಥೆಯ ಈ ನಿರ್ಧಾರ ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಹಾಗೂ ಇಂಡಸ್ಟ್ರಿಯಲ್ ಆಟೋಮೇಷನ್ ಸ್ಥಾಪಿತ ವ್ಯವಸ್ಥೆಗಳಲ್ಲಿ ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್‌ನ ಕೇಂದ್ರಿತ ಗಮನ ಬಲಪಡಿಸಲು ನೆರವಾಗಲಿದೆ. ಪ್ರಸ್ತುತ ಎರಡೂ ಸಂಸ್ಥೆಯ ಒಟ್ಟಾರೆ ಆದಾಯ ರು. 85 ಕೋಟಿಯಿದ್ದು, ಮುಂದಿನ 3 ವರ್ಷದಲ್ಲಿ ಆ ಆದಾಯವನ್ನು ರು. 200 ಕೋಟಿಯಾಗಿಸುವ ಗುರಿ ಇದೆ. ಎರಡೂ ಸಂಸ್ಥೆಯಲ್ಲಿ ಒಟ್ಟು 600 ಉದ್ಯೋಗಿಗಳಿದ್ದು, ಮುಂದೆ 250-300 ಜನರನ್ನು ನೇಮಿಸಿಕೊಳ್ಳುವ ಉದ್ದೇಶವೂ ಇದೆ ಎಂದು ಅವರು ತಿಳಿಸಿದರು. ಡಿಯರ್‌ಬಾರ್ನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಮುತಾಲಿಕ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

