ವಾಣಿಜ್ಯ

ರೆಪೋ ದರ ಬದಲಿಲ್ಲ: ಆರ್‌ಬಿಐ

ರೆಪೋ ದರವನ್ನು ಆರ್‌ಬಿಐ ಬದಲಾಯಿಸುವು ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹ...

ರೆಪೋ ದರ ಬದಲಿಲ್ಲ: ಆರ್‌ಬಿಐ
ರಘುರಾಂ ರಾಜನ್
Published On :

ಮುಂಬೈ: ರೆಪೋ ದರವನ್ನು ಆರ್‌ಬಿಐ ಬದಲಾಯಿಸುವು ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್‌ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ.

ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಗಳವಾರ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಘೋಷಿಸಿದ್ದು, ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು ಕಳೆದ ಜನವರಿಯಿಂದ ರೆಪೊ ದರವನ್ನು ಶೇ. 8ರ ದರದಲ್ಲಿಟ್ಟಿದೆ.

ಮಂಗಳವಾರ ನಡೆದ ಹಣಕಾಸು ನೀತಿ ಪರಾಮರ್ಶೆಯಲ್ಲಿ ಗರ್ವನರ್ ರಘುರಾಮ್ ರಾಜನ್ ರೆಪೋ ದರದಲ್ಲಿ ಯಾವುದೇ ಹೆಚ್ಚಳವಿಲ್ಲ. ರೆಪೋ ದರ ಯಾಥಾಸ್ಥಿತಿಯಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ.

ಸದ್ಯಕ್ಕೆ ರೆಪೋ ದರು ಶೇ.8ರಷ್ಟಿದೆ. ಆರ್‌ಬಿಐ ತನ್ನ ದರಗಳನ್ನು ಕಡಿತಗೊಳಿಸಿದರೆ ಅರ್ಥ ವ್ಯವಸ್ಥೆಗೆ ಉತ್ತಮ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದರು.

ಮುಂಬರುವ ವರ್ಷದಲ್ಲಿ ರೆಪೋ ದರದಲ್ಲಿ ಬದಲಾವಣೆ ಮಾಡಿಲ್ಲಿದ್ದು, ಬಡ್ಡಿ ದರ ಕಡಿತಗೊಳಿಸುವುದರ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ರಾಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.