ಆನ್‌ಲೈನ್ ಮೂಲಕ ಹಣ ವರ್ಗಾವಣೆಗೆ ದೂರವಾಣಿ ಪರಿಶೀಲನೆ ಕಡ್ಡಾಯ
ಟೆಕ್ನಾಲಜಿ ಬೆಳೆಯುತ್ತಿದ್ದಂತೆ ನಾಗರಿಕರು ಅದಕ್ಕೆ ಹೆಚ್ಚು ಅವಲಂಭಿತರಾಗಿರುತ್ತಾರೆ....

ಬೆಂಗಳೂರು: ಟೆಕ್ನಾಲಜಿ ಬೆಳೆಯುತ್ತಿದ್ದಂತೆ ನಾಗರಿಕರು ಅದಕ್ಕೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಇತ್ತೀಚೆಗಂತೂ, ನಾಗರಿಕರು ತಮ್ಮ ಕೆಲಸಗಳನ್ನು ಸುಲಭ ರೀತಿಯಲ್ಲಿ ಮುಗಿಸಬಹುದು ಎನ್ನುವ ಉದ್ದೇಶದಿಂದ ಆನ್‌ಲೈನ್‌ಗೆ ಮೊರೆ ಹೋಗುತ್ತಿದ್ದಾರೆ. ಬ್ಯಾಂಕ್‌ಗಳಿಗೆ ಖುದ್ದಾಗಿ ತೆರಳುವ ಬದಲು, ಆನ್‌ಲೈನ್‌ನಲ್ಲೇ ಹಣ ವರ್ಗಾವಣೆ ಮಾರ್ಗ ಬಹಳ ಸುಲಭವಾಗಿಬಿಟ್ಟಿದೆ.
ಆದರೆ, ಇನ್ನು ಮುಂದೆ ಆನ್‌ಲೈನ್‌ನಲ್ಲಿ ಹಣ ವರ್ಗಾವಣೆ ಮಾಡಬೇಕಾದರೆ ಸ್ವಲ್ಪ ಎಚ್ಚೆತ್ತುಕೊಳ್ಳಬೇಕಿದೆ. ಏಕೆಂದರೆ, ಆನ್‌ಲೈನ್‌ನಲ್ಲಿ ಹಣ ವರ್ಗಾವಣೆ ಮಾಡಬೇಕಾದರೆ, ಆನ್‌ಲೈನ್ ವಂಚಕರು ಆ ಹಣವನ್ನು ತಮ್ಮ ಖಾತೆಗೆ ಲಪಟಾಯಿಸಿಕೊಳ್ಳುವ ಪ್ರಕರಣ ಹೆಚ್ಚಾಗುತ್ತಿದೆ.
ಇದಕ್ಕೆ ಕಡಿವಾಣ ಹಾಕಲೆಂದೆ, ಅಪರಾಧ ತನಿಖಾ ದಳ(ಸಿಐಡಿ) ಆನ್‌ಲೈನ್ ಬ್ಯಾಂಕಿಂಗ್ ಮೂಲಕ ಹಣ ವರ್ಗಾವಣೆ ಮಾಡಬೇಕಾದರೆ ದೂರವಾಣಿ ಪರಿಶೀಲನೆ ಕಡ್ಡಾಯವಾಗಿ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತಂದಿದೆ.
ಇನ್ನು ಮುಂದೆ ಗ್ರಾಹಕನ ಖಾತೆಯಿಂದ ಹಣ ವರ್ಗಾವಣೆ ಮಾಡಬೇಕಾದರೆ ಬ್ಯಾಂಕ್‌ಗಳು ದೂರವಾಣಿ ಕರೆ ಮೂಲಕ ಗ್ರಾಹಕನಿಂದ ಮಾಹಿತಿಯನ್ನು ಪಡೆದ ನಂತರ ಹಣ ವರ್ಗಾವಣೆ ಮಾಡಬೇಕು. ಈ ಸಂಬಂಧ ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ಇಮೇಲ್ ಮಾಡಲಾಗಿದೆ ಎಂದು ಅಪರಾಧ ತನಿಖಾ ದಳ ಹೇಳಿದೆ.
ಇತ್ತೀಚೆಗಷ್ಟೇ ಕೆನಡಾದಲ್ಲಿ ವಾಸಗಿರುವ ವ್ಯಕ್ತಿಯೊಬ್ಬರು ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಬೇಕಾದರೆ, ತಮ್ಮ ಖಾತೆಯಲ್ಲಿದ್ದ 1 ಕೋಟಿ ಹಣವನ್ನು ಲೂಟಿ ಮಾಡಲಾಗಿದೆ ಎಂದು ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆದರೆ, ಯಾವ ರೀತಿ ಹಣ ಪೋಲಾಗಿದೆ ಎಂಬುದರ ಬಗ್ಗೆ ಸರಿಯಾಗಿ ಮಾಹಿತಿ ಸಿಗುತ್ತಿಲ್ಲ. ದುಬೈನಲ್ಲಿರುವ ನಾಲ್ವರು ಆನ್‌ಲೈನ್ ವಂಚಕರು ಈತನ ಖಾತೆಯಿಂದ ಹಣ ಲಪಟಾಯಿಸಿಕೊಂಡಿರುವ ಮಾಹಿತಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಆನ್‌ಲೈನ್ ಹಣ ವರ್ಗಾವಣೆ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ ಸೈಬರ್ ಅಪರಾಧ ದಳ ಈ ಕ್ರಮಕ್ಕೆ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


