ಕೇಂದ್ರ ಸರ್ಕಾರದ ಜತೆ ಭಿನ್ನಾಭಿಪ್ರಾಯವಿಲ್ಲ
ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ...

ಇಂದೋರ್: ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ ಹಣಕಾಸು ನಸಂಹಿತೆಯಲ್ಲಿ ಪ್ರಸ್ತಾಪಿಸಿರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಕುರಿತುಕೇಂದ್ರ ಸರ್ಕಾರದ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಆರ್‍ಬಿಐ ಉಪ ಗೌರ್ನರ್
ಎಸ್.ಎಸ್.ಮುಂದ್ರ ಹೇಳಿದ್ದಾರೆ. ಆರ್‍ಬಿಐನ ಪ್ರಮುಖ ಬಡ್ಡಿದರ ಗಳನ್ನು ಗೌರ್ನರ್ ನಿರ್ಧರಿಸದೆ ಹಣಕಾಸು ನೀತಿ ಸಮಿತಿ ನಿರ್ಧರಿಸಬೇಕೆಂದು ವರದಿಯಲ್ಲಿ ಪ್ರಸ್ತಾಪಿಸಲಾಗಿ
ದೆ. ಇದರಿಂದ ಗೌರ್ನರ್ ಅಧಿಕಾರ ಮೊಟಕಾಗಲಿದೆ. ದೇಶದಆರ್ಥಿಕ ವಲಯದಲ್ಲಿ ಈ ಕುರಿತು ಭಾರಿ ಚರ್ಚೆಗಳಾಗುತ್ತಿವೆ.ಬಡ್ಡಿದರಗಳನ್ನು ನಿಗದಿಪಡಿಸಲು ಸಮಿತಿಯೊಂದನ್ನು ರಚಿಸಬೇಕೆಂದು ಆರ್‍ಬಿಐ ಬಹಳ ಹಿಂದೆಯೇ ಹೇಳಿತ್ತು. ಕೆಲವು ದೇಶಗಳಲ್ಲಿ ಈಗಾಗಲೆ ಇಂತಹ ಸಮಿತಿಗಳಿದ್ದು ಪ್ರಮುಖ ಹಣಕಾಸು ನೀತಿಗಳನ್ನು ರೂಪಿಸುತ್ತಿವೆಎಂದಿದ್ದಾರೆ. ಎಂಪಿಸಿ ರಚಿಸುವುದಕ್ಕೆ ಸಂಬಂಧಿಸಿ ದಂತೆ ಆರ್‍ಬಿಐ ಈ ಹಿಂದೆಯೂ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಈಗಲೂ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಬಡ್ಡಿದರಗಳನ್ನು ಕಡಿತಗೊಳಿಸುವ ಕುರಿತು ಪ್ರತಿಕ್ರಿಯಿಸಿರುವ ಅವರು ದೇಶದ ಆರ್ಥಿಕ ಪರಿಸ್ಥಿತಿಯನ್ನು ಇದು ಅವಲಂಬಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್ ಗಳಲ್ಲಿ ಅನುತ್ಪಾದಕ ಆಸ್ತಿ ಮತ್ತು ವಸೂಲಾಗದ ಸಾಲಗಳ ಪ್ರಮಾಣ ಹೆಚ್ಚುತ್ತಿರುವುದರ ಬಗ್ಗೆಯೂ ಮುಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


