ಸಣ್ಣ ಕೈಗಾರಿಕೆಗಳಿಗೆ ರು . 1 ಲಕ್ಷ ಕೋಟಿ ಸಾಲ
ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಬಂಡವಾಳ ಮುಗ್ಗಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಹಣಕಾಸು...

ನವದೆಹಲಿ: ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಬಂಡವಾಳ ಮುಗ್ಗಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಹಣಕಾಸು ಸಾಲಿನಲ್ಲಿ ರು. 1 ಲಕ್ಷ ಕೋಟಿ ಸಾಲ ಯೋಜನೆ ಜಾರಿಗೆ ತರುವ ಚಿಂತನೆ ನಡೆಸಿದೆ. ಮುದ್ರ ಯೋಜನೆ ಅಡಿಯಲ್ಲಿ ಸಾಲ ವಿತರಿಸಲು ಒಂದು ತಿಂಗಳ ಕಾಲ ಸಾಲ ಮೇಳ ಆಯೋಜಿಸಲಾಗುವುದು ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಹಷ್ಮುಖ್ ಅಧಿಯಾ ತಿಳಿಸಿದ್ದಾರೆ. ಸಾರ್ವಜನಿಕ ವಲಯ,ಖಾಸಗಿ, ಗ್ರಾಮೀಣ ಬ್ಯಾಂಕ್‍ಗಳು ಮತ್ತು ವಿದೇಶಿ ಬ್ಯಾಂಕ್‍ಗಳಿಗೆ ಟಾರ್ಗೆಟ್ ನಿಗದಿ ಪಡಿಸಲಾಗುವುದು. ಇದರಿಂದ ಈ ಕ್ಷೇತ್ರಕ್ಕೆ ಹೋಲಿಸಿದರೆ ದುಪ್ಪಟ್ಟಾಗಲಿದೆ ಎಂದು ಅವರು ಅಂದಾಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


