ದೇಶದ ಆರ್ಥಿಕತೆ ಸುಧಾರಣೆಯತ್ತ: ರಘುರಾಮ್ ರಾಜನ್
ಭಾರತದ ಆರ್ಥಿಕತೆಯಲ್ಲಿ ಚೇತರಿಕೆಯ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಮುಂಬೈ: ಭಾರತದ ಆರ್ಥಿಕತೆಯಲ್ಲಿ ಚೇತರಿಕೆಯ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಘುರಾಮ್ ರಾಜನ್ ಅವರು, ಭಾರತದ ಆರ್ಥಿಕತೆಯಲ್ಲಿ ಸಾಕಷ್ಟು ಚೇತರಿಕೆ ಕಂಡುಬರುತ್ತಿದೆ. ಗ್ರಾಮೀಣ ಭಾಗದ ಬೇಡಿಕೆಗಳನ್ನು ಪೂರೈಸಿದರೆ ಆರ್ಥಿಕತೆ ಉತ್ತೇಜನಕ್ಕೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ವಾಣಿಜ್ಯ ನಗರಿ ಮುಂಬೈನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಅವರು ಆಯೋಜಿಸಿದ್ದ ವಾಣಿಜ್ಯ ಚರ್ಚಾ ಕಾರ್ಯಕ್ರಮದಲ್ಲಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಅವರು ಪಾಲ್ಗೊಂಡಿದ್ದರು. ವಿಶ್ವ ಆರ್ಥಿಕತೆಗೆ ಸಂಬಂಧಿಸಿದಂತೆ ಕೇಳಿಬಂದ ಪ್ರಶ್ನೆಗೆ ಉತ್ತರಿಸಿದ ಅವರು, ಚೀನಾ ದೇಶದ ಕರೆನ್ಸಿ (ಯುವಾನ್) ನ ಅಪಮೌಲ್ಯೀಕರಣದಿಂದ ಭಾರತ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮವೇನೂ ಆಗುವುದಿಲ್ಲ. ಆದರೂ ಕರೆನ್ಸಿ ಗಳ ಅಪಮೌಲ್ಯೀಕರಿಸುವ ವಿಶ್ವ ಬ್ಯಾಂಕುಗಳ ನೀತಿ ವಿವಿಧ ದೇಶಗಳ ಆರ್ಥಿಕತೆಯನ್ನು ಕಾಡುತ್ತದೆ. ವಿಶ್ವ ಆರ್ಥಿಕತೆ ಮತ್ತು ಆರ್ಥಿಕ ಹಿನ್ನಡೆ ಪರಿಸ್ಥಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೂಕ್ಷ್ಮವಾಗಿ ವೀಕ್ಷಿಸುತ್ತಿದೆ ಎಂದು ರಘುರಾಮ್ ರಾಜನ್ ಹೇಳಿದರು.
ಕಳೆದ ಆಗಸ್ಟ್ 11ರಂದು ಚೀನಾ ಷೇರುಮಾರುಕಟ್ಟೆಯ ಕುಸಿತದಿಂದಾಗಿ ಚೀನಾ ದೇಶದ ಕರೆನ್ಸಿ (ಯುವಾನ್) ಮೌಲ್ಯ ಶೇ.2 ರಷ್ಟು ಕುಸಿತಗೊಂಡಿತ್ತು. ಇದೇ ಸೆಪ್ಟೆಂಬರ್ 29ರಂದು ಆರ್ ಬಿಐ ತನ್ನ ಆರ್ಥಿಕ ನೀತಿಯನ್ನು ಪುನರ್ ವಿಮರ್ಶೆ ಮಾಡುತ್ತಿದ್ದು, ಕಳೆದ ಜುಲೈ ತಿಂಗಳಿನಲ್ಲಿ ಗ್ರಾಹಕ ಹಣದುಬ್ಬರ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ ಆರ್ ಬಿಐ ದರ ಕಡಿತಗೊಳಿಸುವ ಕುರಿತು ನಿರೀಕ್ಷೆಗಳು ಗರಿಗೆದರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

