ಆರ್ಥಿಕ ಬೆಳವಣಿಗೆ ಶೇ.7 ಕ್ಕೆ ಕುಸಿತ
ಜೂನ್- ಏಪ್ರಿಲ್ ವರೆಗಿನ ತ್ರೈಮಾಸಿಕದಲ್ಲಿ ಭಾರತದ ಅರ್ಥಿಕ ಬೆಳವಣಿಗೆ ಶೇ.7.5 ರಿಂದ ಶೇ.7 ಕ್ಕೆ ಕುಂಟಿತವಾಗಿದೆ.

ನವದೆಹಲಿ: ಜೂನ್- ಏಪ್ರಿಲ್ ವರೆಗಿನ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.7.5 ರಿಂದ ಶೇ.7 ಕ್ಕೆ ಕುಂಟಿತವಾಗಿದೆ.
ದೇಶದ ಆರ್ಥಿಕ ಬೆಳವಣಿಗೆ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಪ್ರಕಟವಾಗಿದ್ದು. ಕಳೆದ ತ್ರೈಮಾಸಿಕದಲ್ಲಿ ಶೇ.7 .5 ಷ್ಟಿದ್ದ ಬೆಳವಣಿಗೆ ಪ್ರಸಕ್ತ ತ್ರೈಮಾಸಿಕದಲ್ಲಿ ಶೇ.7 ಕ್ಕೆ ಕುಸಿದಿದೆ. ರಾಯಟರ್ಸ್ ಸಂಸ್ಥೆ ನೀಡಿದ್ದ ವಿಶ್ಲೇಷಣೆ ಪ್ರಕಾರ ಪ್ರಸಕ್ತ ಸಾಲಿನಲ್ಲಿ ಶೇ.7 .4 ರಷ್ಟು ಆರ್ಥಿಕ ಬೆಳವಣಿಗೆ ಮುನ್ಸೂಚನೆ ಇತ್ತು.
ಆರ್ಥಿಕ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ಥಿಕ ತಜ್ಞರು ಜಿಡಿಪಿ ದರ ನಿರಾಶಾದಾಯಕವಾಗಿದ್ದು, ಭಾರತದ ಬೆಳವಣಿಗೆ ಆಂತರಿಕ ಬೇಡಿಕೆ ಚಾಲಿತವಾಗಿರಬೇಕು ಅಭಿಪ್ರಾಯಪಟ್ಟಿದ್ದಾರೆ. ಆರ್ ಬಿಐ ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್ ಗಳನ್ನು ಕಡಿತಗೊಳಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


