ಮೈಕ್ರೊಮ್ಯಾಕ್ಸ್ ರು.300 ಕೋಟಿ ಹೂಡಿಕೆ
ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಮೊಬೈಲ್ ತಯಾರಿಕಾ ಕಂಪನಿ ಮೈಕ್ರೊಮ್ಯಾಕ್ಸ್ ರು.300 ಕೋಟಿ ಬಂಡವಾಳ...

Published On :
ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಮೊಬೈಲ್ ತಯಾರಿಕಾ ಕಂಪನಿ ಮೈಕ್ರೊಮ್ಯಾಕ್ಸ್ ರು.300 ಕೋಟಿ ಬಂಡವಾಳ ತೊಡಗಿಸಲಿದೆ.
ಈ ಬಂಡವಾಳದಲ್ಲಿ ಮೂರು ಹೊಸ ತಯಾರಿಕಾ ಘಟಕಗಳನ್ನು ನಿರ್ಮಾಣ ಮಾಡಲಿದ್ದು ತಯಾರಿಕೆ ಹೆಚ್ಚಿಸಲಿದೆ. ಆ ಮೂಲಕ ಚೀನಾದಿಂದ ಮಾಡಿಕೊಳ್ಳುವ ಆಮದು ಕಡಿಮೆಗೊಳಿಸುವುದು ಕಂಪನಿಯ ಯೋಜನೆಯಾಗಿದೆ.
ಹೊಸ ಮೊಬೈಲ್ ತಯಾರಿಕಾ ಘಟಕಗಳನ್ನು ರಾಜಸ್ಥಾನ ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ನಿರ್ಮಿಸಲಿದ್ದು ಮುಂದಿನ ವರ್ಷದಿಂದ ಕಾರ್ಯಾರಂಭ ಮಾಡಲಿವೆ.
ತೆಲಂಗಾಣದಲ್ಲಿ 20 ಎಕರೆ ಭೂಮಿ ಮತ್ತು ಮೂಲಸೌಕರ್ಯ ಕಲ್ಪಿಸಲಾಗಿದೆ, ರಾಜಸ್ತಾನದಲ್ಲಿ 25 ಎಕರೆ ಭೂಮಿ ನೀಡಿದ್ದು ಇನ್ನು ಕೆಲವೇ ದಿನಗಳಲ್ಲಿ ನಿರ್ಮಾಣ ಆರಂಭಿಸಲಾಗುವುದು. ತಿರುಪತಿಯಲ್ಲೂ ಶೀಘ್ರದಲ್ಲಿ ತಯಾರಿಕೆ ಆರಂಭಿಸಲಾಗುವುದು ಎಂದು ಕಂಪನಿ ಸಹ ಸಂಸ್ಥಾಪಕ ರಾಜೇಶ್ ಅಗರ್‍ವಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


