ವಾಣಿಜ್ಯ

ಆರ್ಥಿಕತೆ ಬಗ್ಗೆ ತೃಪ್ತಿಯಿದೆ: ಜೇಟ್ಲಿ

ಜಾಗತಿಕ ಪ್ರಕ್ಷುಬ್ಧತೆ, ಚಂಚಲತೆಯ ನಡುವೆಯೂ ಭಾರತೀಯ ಆರ್ಥಿಕತೆಯ ಸಾಧನೆ ತೃಪ್ತಿಕರವಾಗಿದೆ ಎಂದು ಕೇಂದ್ರ...

ಆರ್ಥಿಕತೆ ಬಗ್ಗೆ ತೃಪ್ತಿಯಿದೆ: ಜೇಟ್ಲಿ
ಅರುಣ್ ಜೇಟ್ಲಿ
Published On :
ನವದೆಹಲಿ: ಜಾಗತಿಕ ಪ್ರಕ್ಷುಬ್ಧತೆ, ಚಂಚಲತೆಯ ನಡುವೆಯೂ ಭಾರತೀಯ ಆರ್ಥಿಕತೆಯ ಸಾಧನೆ ತೃಪ್ತಿಕರವಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.
ಜಾಗತಿಕ ಆರ್ಥಿಕತೆಯ ಹಿಂಜರಿತದ ಸವಾಲನ್ನು ಭಾರತ ಸಮರ್ಥವಾಗಿ ಎದುರಿಸಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಪ್ರಗತಿ ಇನ್ನಷ್ಟು ಸುಧಾರಣೆಯಾಗಲಿದೆ ಎಂದಿದ್ದಾರೆ. 
2016ರಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವಿಧೇಯಕಕ್ಕೆ ಅಂಗೀಕಾರ ಪಡೆಯುವುದು, ಭಾರತದಲ್ಲಿ ಉದ್ದಿಮೆ ನಡೆಸುವ ಪ್ರಕ್ರಿಯೆಗಳನ್ನು ಸರಳಗೊಳಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದಿದ್ದಾರೆ. 
ಇದೇ ವೇಳೆ, ಗೃಹ ಸಚಿವ ರಾಜನಾಥ್‍ಸಿಂಗ್, 2016ರಲ್ಲಿ ದೇಶದಲ್ಲಿ ಶಾಂತಿಯುತ, ಸುರಕ್ಷಿತ, ಸೌಹಾರ್ದಯುತ ವಾತಾವರಣ ನಿರ್ಮಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.