ಐಬಿಎಂ ಸಂಸ್ಥೆಯಲ್ಲಿ ಪಿಂಕ್ ಸ್ಲಿಪ್?
ತಂತ್ರಜ್ಞಾನ ದೈತ್ಯ ಐಬಿಎಂ ಸಂಸ್ಥೆಯಲ್ಲಿ ಉದ್ಯೋಗಗಳನ್ನು ಕಡಿತಗೊಳಿಸಲಾಗುವುದು ಎಂಬ ವರದಿಗಳು

ಬೆಂಗಳೂರು: ತಂತ್ರಜ್ಞಾನ ದೈತ್ಯ ಐಬಿಎಂ ಸಂಸ್ಥೆಯಲ್ಲಿ ಉದ್ಯೋಗಗಳನ್ನು ಕಡಿತಗೊಳಿಸಲಾಗುವುದು ಎಂಬ ವರದಿಗಳು ಬಂದು ದಿನಗಳು ಕಳೆದರೂ ಭಾರತದಲ್ಲಿ ಎಷ್ಟು ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬುದರ ಮೇಲೆ ಸ್ಪಷ್ಟತೆ ಇಲ್ಲ.
ಭಾರತದ ವಿವಿಧ ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಸ್ಥೆಯಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಉದ್ಯೋಗದಲ್ಲಿದ್ದಾರೆ. ಅಂತರಾಷ್ಟ್ರೀಯ ಮಾಧ್ಯಮವೊಂದರ ಪ್ರಕಾರ ಜಾಗತಿಕ ಮಟ್ಟದಲ್ಲಿ ನಾಲ್ಕರಲ್ಲಿ ಒಬ್ಬರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ವರದಿ ಮಾಡಿತ್ತು. ಅಂದರೆ ಸುಮಾರು ೧ ಲಕ್ಷಜನ ಜಾಗತಿಕವಾಗಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಆದರೆ ಐಬಿಎಂ ಸಂಸ್ಥೆ ಈ ವರದಿಗಳನ್ನು ತಿರಸ್ಕರಿಸಿದೆ.
ಈ ಮಧ್ಯೆ ಯಾವುದೇ ಉದ್ಯೋಗ ಕಡಿತದ ಬಗ್ಗೆ ನಮಗೆ ಮಾಹಿತಿ ಇಲ್ಲ ಎನ್ನುತ್ತಾರೆ ಐಬಿಎಂ ನೌಕರರು. "ಯಾವುದೇ ಉದ್ಯೋಗ ಕಡಿತದ ಬಗ್ಗೆ ನಮಗೆ ತಿಳಿದಿಲ್ಲ. ನಾವು ಯಾವುದೇ ಉದ್ಯೋಗ ಕಡಿತವನ್ನು ನೋಡಿಲ್ಲ" ಎನ್ನುತ್ತಾರೆ ಐಬಿಎಂ ಭಾರತದದ ಉದ್ಯೋಗಿಯೊಬ್ಬರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


