ವಿದೇಶಿ ಹೂಡಿಕೆ ನಿಯಮ ಸರಳಗೊಳಿಸಿದ ಕೇಂದ್ರ ಸರ್ಕಾರ
ಬೃಹತ್ ಕಂಪೆನಿಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಗಲು ಭಾರತ ವಿದೇಶಿ ಹೂಡಿಕೆ ನಿಯಮಗಳನ್ನು ಸರಳಗೊಳಿಸಿದೆ...

ನವದೆಹಲಿ: ಬೃಹತ್ ಕಂಪೆನಿಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಗಲು ಭಾರತ ವಿದೇಶಿ ಹೂಡಿಕೆ ನಿಯಮಗಳನ್ನು ಸರಳಗೊಳಿಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಸಂಯುಕ್ತ ಹೂಡಿಕೆ(composite cap) ಯಡಿ ವಿದೇಶಿ ನೇರ ಹೂಡಿಕೆ, ವಿದೇಶಿ ಖಾತೆ ಹೂಡಿಕೆ ಮತ್ತು ಅನಿವಾಸಿ ಭಾರತೀಯರ ಹೂಡಿಕೆಗಳನ್ನು ಒಟ್ಟಿಗೆ ತರಲಾಗುವುದು ಎಂದು ಅವರು ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಹೇಳಿದರು.
ಸಚಿವರು ಹೀಗೆ ಪ್ರಕಟಿಸಿದ ಕೂಡಲೇ ಬ್ಯಾಂಕಿಂಗ್ ವಲಯದ ಷೇರುಗಳು ಏರಿಕೆ ಕಂಡುಬಂದವು.
ಭಾರತದಲ್ಲಿ ವಿದೇಶಿ ಬಂಡವಾಳ ಹೆಚ್ಚು ಹರಿದುಬರಲು ಮತ್ತು ಉದ್ಯೋಗವಕಾಶ ಜಾಸ್ತಿಯಾಗಲು ವಿದೇಶಿ ಬಂಡವಾಳ ಹೂಡಿಕೆ ನಿಯಮಗಳನ್ನು ಸರಳಗೊಳಿಸುವಂತೆ ವಾಣಿಜ್ಯ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಅಭಿವೃದ್ಧಿ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು.
ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ, ಅಧಿಕಾರಿಗಳ ಅನುಮೋದನೆಯಿಲ್ಲದೆ, ಔಶಧಿ ಮತ್ತು ರೈಲ್ವೆ ವಲಯಗಳಲ್ಲಿ ಶೇಕಡಾ 100ರಷ್ಟು ವಿದೇಶಿ ಹೂಡಿಕೆಗೆ ಅನುಮತಿ ನೀಡಿದೆ. ವಿಮೆ ಮತ್ತು ರಕ್ಷಣಾ ವಲಯಗಳಲ್ಲಿ ಶೇಕಡಾ 49ರಷ್ಟು ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


